ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ ಎಸ್ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ್ದು, ರಾಜ್ಯಪಾಲರು ಹಾಲಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ.
ಯಡಿಯೂರಪ್ಪ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯಕ್ಕೆ ಮುಂದಿನ ಸಿಎಂ ಪದಗ್ರಹಣವಾಗುವವರೆಗೂ ಯಡಿಯೂರಪ್ಪ ಅವರಿಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ಸೂಚನೆ ನೀಡಿದರು. ಹಾಗೆಯೇ ಹಾಲಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದರು.
ಇದೇ ಸಂದರ್ಭದಲ್ಲಿ ತಮ್ಮ ರಾಜೀನಾಮೆ ವಿಚಾರವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೂ ಯಡಿಯೂರಪ್ಪ ತಲುಪಿಸಿದ್ದಾರೆ.
ಮುಂದಿನ ಗುರುವಾರ ಮುಂದಿನ ಸಿಎಂ ಪದಗ್ರಹಣ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಈಗಾಗಲೇ ಈ ಸಂಬಂಧ ಸಿದ್ಧತೆ ಆರಂಭ ಮಾಡಲಾಗಿದೆ. ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಬಗ್ಗೆ ಸಂಸದೀಯ ಮಂಡಳಿಯ ಸಭೆಯಲ್ಲಿ ತೀರ್ಮಾನ ಮಾಡುವುದಾಗಿ ಹೈಕಮಾಂಡ್ ತಿಳಿಸಿದೆ. ಈ ಸಂಬಂಧ ವೀಕ್ಷಕರಾಗಿ ನಾಳೆ ರಾಜ್ಯಕ್ಕೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.