ತಿರುವನಂತಪುರ: ದಿನಗೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಕೇರಳದ ಇಡುಕ್ಕಿಯ ಸೆಲ್ವಮರಿ ಅವರು ಪ್ರೌಢಶಾಲೆಯ ಶಿಕ್ಷಕರಾಗಿ ನೇಮಕವಾಗಿದ್ದು, ಅವರಿಗೆ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ದೂರವಾಣಿ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ದಿನಗೂಲಿ ಕೆಲಸ ಮಾಡಿ ಬದುಕು ಸಾಗಿಸುತ್ತಿದ್ದ ಸೆಲ್ವಮರಿ ಹಲವು ವರ್ಷಗಳ ಕಾಲ ಕಷ್ಟಪಟ್ಟು ತಮ್ಮ ಶೈಕ್ಷಣಿಕ ವಿದ್ಯಾಭ್ಯಾಸವನ್ನು ಮುಂದುವರಿಸಿದ್ದರು. ಏಲಕ್ಕಿ ಎಸ್ಟೇಟ್ನಲ್ಲಿ ದಿನಗೂಲಿ ಮಾಡುತ್ತಿದ್ದ ಅವರು ಎಂಎಸ್ಸಿ, ಎಂಎಡ್, ಎಂಫಿಲ್ನಲ್ಲಿ ಮೊದಲ ರ್ಯಾಂಕ್ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಇದೀಗ ಪಿಎಚ್ಡಿ ಸಹ ಮಾಡುತ್ತಿದ್ದಾರೆ. ಇವರ ಈ ಅಸಾಧಾರಣ ಸಾಧನೆಗೆ ರಾಜ್ಯಪಾಲರು ಖುದ್ದು ಕರೆ ಮಾಡಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Hon'ble Governor Shri Arif Mohammed Khan congratulated over phone, Ms. Selvamari, on becoming a high school teacher in Idukki after struggling years as daily labourer in cardamom estate to pursue studies. With MSc,MEd& 1st rank in MPhil, she now pursues PhD:PRO,KeralaRajBhavan pic.twitter.com/4vOGIPKlYd
— Kerala Governor (@KeralaGovernor) July 26, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.