
ಬೆಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಆದೇಶದಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದ ಹಣವನ್ನು ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ನೀಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಅನ್ಯಮತೀಯ ಪ್ರಾರ್ಥನ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಕುರಿತು ಎದ್ದಿರುವ ಚರ್ಚೆಯ ಕುರಿತು ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದ್ದು, ರಾಜ್ಯದ 757 ಪ್ರಾರ್ಥನ ಕೇಂದ್ರಗಳಿಗೆ ಹಾಗೂ 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನ ಕೇಂದ್ರಗಳಿಗೆ ಸರ್ಕಾರ ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ನೀಡುತ್ತಿದ್ದ ಅನುದಾನ ತಡೆ ಹಿಡಿದಿದ್ದು, ಇಂದು ಅಧಿಕೃತ ಆದೇಶ ಹೊರಡಿಸಿದೆ.
ಇನಾಂ ರದ್ದತಿ ಕಾಯ್ದೆ 1977 ರ ಪರಿಹಾರಾರ್ಥವಾಗಿ ನೀಡುತ್ತಿರುವ ತಸ್ತಿಕ್ ಮತ್ತು ವರ್ಷಾಸನವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ದೇವಸ್ಥಾನಗಳಿಂದ ನೀಡುವ ಬದಲು, ಇನ್ನು ಮುಂದೆ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ , ಹಜ್ ಮತ್ತು ವಕ್ಫ್ ಇಲಾಖೆಯ ಮೂಲಕ ತಸ್ತಿಕ್ ಮತ್ತು ವರ್ಷಾಸನ ನೀಡಲು ಅನುದಾನ ಬಿಡುಗಡೆ ಮಾಡತಕ್ಕದ್ದು ಎಂದು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವರದಿಯನ್ನಾದರಿಸಿ ಸರ್ಕಾರ ಆದೇಶ ನೀಡಿದೆ.
[pdf-embedder url=”https://news13.in/wp-content/uploads/2021/07/20210726185802.pdf”]
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


