ನವದೆಹಲಿ: ಅಕ್ಟೋಬರ್ 3 ರಂದು ಜಾಯಿಂಟ್ ಎಂಟ್ರೆನ್ಸ್ ಎಕ್ಸಾಮಿನೇಷನ್ (ಜೆಇಇ) ಪರೀಕ್ಷೆಯು ನಡೆಯಲಿರುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಈ ಹಿಂದೆ ಜೆಇಇ ಪರೀಕ್ಷೆಯನ್ನು ಜುಲೈ 3 ರಂದು ನಿಗದಿ ಮಾಡಲಾಗಿತ್ತು. ಆದರೆ ಕೊರೋನಾ ಹಿನ್ನೆಲೆಯಲ್ಲಿ ಈ ಪರೀಕ್ಷೆಗಳನ್ನು ಮುಂದೂಡಲಾಗಿತ್ತು.
ಇದೀಗ ಜೆಇಇ ಅಡ್ವಾನ್ಸ್ಡ್ 2021 ಅಥವಾ ಐಐಟಿ ಜೆಇಇ ಪರೀಕ್ಷೆಗಳನ್ನು ಅಕ್ಟೋಬರ್ 3 ರಂದು ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಕೊರೋನಾ ಮುಂಜಾಗ್ರತಾ ನಿಯಮಗಳನ್ನು ಅನುಸರಿಸಿಕೊಂಡು ಈ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವಾಲಯದ ಮೂಲಗಳು ತಿಳಿಸಿವೆ. ಈ ಬಾರಿ ಈ ಪರೀಕ್ಷೆಯನ್ನು ಐಐಟಿ ಖರಗ್ಪುರ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.