ನವದೆಹಲಿ: ರಸಗೊಬ್ಬರಕ್ಕೆ ಸಂಬಂಧಿಸಿದಂತೆ ವಿದೇಶೀ ಆಮದು ಕಡಿಮೆ ಮಾಡುವ ನಿಟ್ಟಿನಲ್ಲಿ, ದೇಶೀಯವಾಗಿಯೇ ರಸಗೊಬ್ಬರವನ್ನು ಹೆಚ್ಚು ಉತ್ಪಾದನೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಸಂಬಂಧ ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು, ಸ್ಥಳೀಯವಾಗಿ ದೊರೆಯುವ ಕಚ್ಚಾ ವಸ್ತುಗಳನ್ನು ಬಳಕೆ ಮಾಡಿ ದೇಶೀಯ ಮಟ್ಟದಲ್ಲಿ ರಸಗೊಬ್ಬರಗಳ ಉತ್ಪಾದನೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಇದಕ್ಕಾಗಿ ಸ್ಥಳೀಯ ಉತ್ಪಾದಕರನ್ನು ಅನ್ವೇಷಿಸಲಾಗುವುದು. ರಸಗೊಬ್ಬರಕ್ಕೆ ಸಂಬಂಧಿಸಿದಂತೆ ವಿದೇಶೀ ಅವಲಂಬನೆ ತಗ್ಗಿಸುವುದು, ಆಮದು ತಗ್ಗಿಸುವ ನಿಟ್ಟಿನಲ್ಲಿ ಇಂತಹ ಮಹತ್ವದ ನಿರ್ಣಯ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.