ನವದೆಹಲಿ: ಆಗಸ್ಟ್ ತಿಂಗಳಲ್ಲಿ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ.
ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಮಾಂಡವೀಯ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಅವರೂ ಭಾಗವಹಿಸಿದ್ದರು.
ಆಗಸ್ಟ್ ತಿಂಗಳಿನಿಂದ ದೇಶದಲ್ಲಿ ಮಕ್ಕಳಿಗೂ ಕೊರೋನಾ ಲಸಿಕೆ ನೀಡಲು ಪ್ರಾರಂಭ ಮಾಡುವುದಾಗಿ ಅವರು ತಿಳಿಸಿದ್ದಾರೆ.
ಈ ಹಿಂದೆ ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ಅವರು ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕಾ ಪ್ರಯೋಗ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸೆಪ್ಟೆಂಬರ್ ಸಂದರ್ಭದಲ್ಲಿ ಮಕ್ಕಳಿಗೆ ಲಸಿಕೆ ದೊರೆಯುವ ಸಾಧ್ಯತೆಗಳನ್ನು ಸಹ ಅವರು ನೀಡಿದ್ದರು. ಸದ್ಯ ನವದೆಹಲಿಯ ಏಮ್ಸ್ನಲ್ಲಿ 2 – 6 ವರ್ಷಗಳೊಳಗಿನ ಮಕ್ಕಳ ಮೇಲೆ ಕೋವ್ಯಾಕ್ಸಿನ್ ಪ್ರಯೋಗ ನಡೆಯುತ್ತಿದೆ ಎಂದು ತಿಳಿಸಿದ್ದರು. ಹಾಗೆಯೇ ಅಹಮದಾಬಾದ್ನ ಝೈಡಸ್ ಕ್ಯಾಡಿಲಾ ಜು. 1 ರಂದು ತನ್ನ ಲಸಿಕೆಯನ್ನು 12 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಅನುಮತಿ ಕೋರಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಗೆ ಅರ್ಜಿ ಸಲ್ಲಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.