ನವದೆಹಲಿ: ಆಗಸ್ಟ್ ತಿಂಗಳಲ್ಲಿ ಸುಮಾರು 15 ಕೋಟಿ ಡೋಸ್ ಕೊರೋನಾ ಲಸಿಕೆ ದೇಶಕ್ಕೆ ಲಭ್ಯವಾಗಲಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಕೊರೋನಾ ಲಸಿಕೆ ಪಡೆದುಕೊಳ್ಳುವವರಲ್ಲಿ ಕೊರೋನಾ ಸಾವಿನ ಪ್ರಮಾಣ 98% ಗಳಷ್ಟು ಕಡಿಮೆ ಎಂಬ ನವದೆಹಲಿಯ ಇಂದ್ರಪ್ರಸ್ಥದಲ್ಲಿನ ಅಪೊಲೋ ಆಸ್ಪತ್ರೆಯ ಅಧ್ಯಯನ ವರದಿಯ ಬೆನ್ನಲ್ಲೇ, ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳು ಲಸಿಕೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ್ದಾರೆ.
ದೊರೆಯಲಿರುವ ಲಸಿಕೆಯ ಒಂದು ಭಾಗ ಕೇಂದ್ರ ಔಷಧ ಪರೀಕ್ಷಾ ಪ್ರಯೋಗಾಲಯಗಳಿಗೆ ಪರೀಕ್ಷಾ ಪ್ರಕ್ರಿಯೆಗಳ ಹಿನ್ನೆಲೆಯಲ್ಲಿ ಕಳುಹಿಸಲಾಗುವುದು. ಅದರ ವರದಿಯ ಬಳಿಕ ಲಸಿಕೆಗಳನ್ನು ಬಿಡುಗಡೆ ಮಾಡಲಾಗುವುದು. ಅಂದಾಜು ಪ್ರಕಾರ ಆಗಸ್ಟ್ ತಿಂಗಳಲ್ಲಿ15 ಕೋಟಿ ಲಸಿಕೆಗಳು ಲಭ್ಯವಾಗಲಿದೆ. ಇದು ಜುಲೈನಲ್ಲಿ ಲಭ್ಯವಿದ್ದ ಲಸಿಕೆಗಳಿಗಿಂತ ಹೆಚ್ಚಾಗಿದೆ. ಜುಲೈನಲ್ಲಿ 12 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.