ನವದೆಹಲಿ: ಸಂಸತ್ ಮಳೆಗಾಲದ ಅಧಿವೇಶನಕ್ಕೆ ವಿಪಕ್ಷಗಳು ಅಡ್ಡಿ ಪಡಿಸುತ್ತಿದ್ದು, ಪ್ರತಿಪಕ್ಷಗಳ ಸದಸ್ಯರ ವರ್ತನೆಯನ್ನು ಮಾಧ್ಯಮಗಳ ಮೂಲಕ ಬಹಿರಂಗ ಮಾಡಿ ಎಂದು ಪ್ರಧಾನಿ ಮೋದಿ ಬಿಜೆಪಿ ಸಂಸದರಿಗೆ ಸೂಚಿಸಿದ್ದಾರೆ.
ಜುಲೈ 19 ರಿಂದ ಮಳೆಗಾಲದ ಅಧಿವೇಶನ ಆರಂಭವಾಗಿದೆ. ಈ ಅಧಿವೇಶನದಲ್ಲಿ ಶಾಂತಿಯುತ ಸಹಕಾರ ನೀಡದೆ, ವಿನಾ ಕಾರಣ ಉಭಯ ಸದನಗಳಲ್ಲಿ ಕೋಲಾಹಲ ಎಬ್ಬಿಸುವ ಕೆಲಸವನ್ನು ವಿಪಕ್ಷಗಳು ಮಾಡುತ್ತಿವೆ. ಪ್ರತಿಪಕ್ಷಗಳ ಇಂತಹ ನಡೆಯ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಸದನದ ಅಮೂಲ್ಯ ಸಮಯವನ್ನು ವ್ಯರ್ಥಮಾಡುವ ಪ್ರಯತ್ನ ಕಾಂಗ್ರೆಸ್ನಿಂದ ಆಗುತ್ತಿದೆ. ಸುಗಮ ಕಲಾಪ ನಡೆಯುವುದಕ್ಕೆ ಪ್ರತಿಪಕ್ಷಗಳು ಅವಕಾಶವನ್ನೇ ನೀಡುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ. ಇವರ ಇಂತಹ ವರ್ತನೆಯನ್ನು ಸಾರ್ವಜನಿಕವಾಗಿ ಮಾಧ್ಯಮಗಳ ಮುಂದೆ ಬಹಿರಂಗಗೊಳಿಸಬೇಕು ಎಂದು ಮೋದಿ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.