ನವದೆಹಲಿ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ಮೋದಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಕ್ಕಾಗಿ ಅಭಿನಂದನೆಗಳು. ಅವರು ಶಾಸಕಾಂಗ, ಆಡಳಿತಾತ್ಮಕ ಅನುಭವಗಳನ್ನು ಹೊಂದಿದ್ದಾರೆ. ಕರ್ನಾಟಕದಲ್ಲಿ ಉತ್ತಮ ಆಡಳಿತ ನೀಡುತ್ತಾರೆಂಬ ವಿಶ್ವಾಸ ನನಗಿದೆ. ಅವರ ಫಲಪ್ರದ ಅಧಿಕಾರಾವಧಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.
Congratulations to Shri @BSBommai Ji on taking oath as Karnataka’s CM. He brings with him rich legislative and administrative experience. I am confident he will build on the exceptional work done by our Government in the state. Best wishes for a fruitful tenure.
— Narendra Modi (@narendramodi) July 28, 2021
ಹಾಗೆಯೇ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಬಗೆಗೂ ಟ್ವೀಟ್ ಮಾಡಿರುವ ಮೋದಿ, ಕರ್ನಾಟಕದ ಅಭಿವೃದ್ಧಿಗೆ, ಪಕ್ಷದ ಅಭಿವೃದ್ಧಿಗೆ ಯಡಿಯೂರಪ್ಪ ಅವರು ಸಲ್ಲಿಸಿರುವ ಸೇವೆಯನ್ನು ಪದಗಳಿಂದ ವರ್ಣಿಸಿ ನ್ಯಾಯ ಒದಗಿಸಲು ಅಸಾಧ್ಯ. ಹಲವು ದಶಕಗಳಿಂದ ಕರ್ನಾಟಕದ ಅಭಿವೃದ್ಧಿಗೆ ಬಿಎಸ್ವೈ ಶ್ರಮಿಸಿದ್ದಾರೆ. ಕರ್ನಾಟಕದ ಉದ್ದಗಲಕ್ಕೂ ಸಂಚರಿಸಿ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ ಎಂದು ತಿಳಿಸಿದ್ದಾರೆ.
No words will ever do justice to the monumental contribution of Shri @BSYBJP Ji towards our Party and for Karnataka’s growth. For decades, he toiled hard, travelled across all parts of Karnataka and struck a chord with people. He is admired for his commitment to social welfare.
— Narendra Modi (@narendramodi) July 28, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.