ನವದೆಹಲಿ: ಭಾರೀ ಮಳೆ ಮತ್ತು ಮೇಘಸ್ಪೋಟದಿಂದಾಗಿ ಜಮ್ಮು ಕಾಶ್ಮೀರದ ಕಿಶ್ತವಾರ್ ಮತ್ತು ಕಾರ್ಗಿಲ್ಗಳಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ರೀತಿಯ ನೆರವನ್ನು ಕೇಂದ್ರ ಸರ್ಕಾರ ನೀಡುತ್ತಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಪ್ರವಾಹದಿಂದ ಕಂಗೆಟ್ಟಿರುವ ಪ್ರದೇಶಗಳ ಜನರ ಸುರಕ್ಷತೆಗಾಗಿ, ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. ಅವರ ರಕ್ಷಣೆಗೆ ಬೇಕಾದ ಎಲ್ಲಾ ರೀತಿಯ ನೆರವನ್ನು ಸಹ ಸರ್ಕಾರ ಒದಗಿಸುವ ಕೆಲಸ ಮಾಡುವುದಾಗಿ ಅವರು ಹೇಳಿದ್ದಾರೆ.
ಭಾರೀ ಮಳೆಗೆ ಕಿಶ್ತವಾರ್ನ ಹಳ್ಳಿಯೊಂದರ ಮನೆಗಳು ಕೊಚ್ಚಿ ಹೋಗಿವೆ. ಡಚ್ಚನ್ ತಹಸಿಲ್ ಪ್ರದೇಶದಲ್ಲಿ 25 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಪ್ರವಾಹದಿಂದ ಜನರನ್ನು ರಕ್ಷಣೆ ಮಾಡುವ ಕೆಲಸದಲ್ಲಿ ಪೊಲೀಸರು, ಸೇನೆ, ಎಸ್ಡಿಆರ್ಎಫ್ ತಂಡಗಳು ಭರದ ಕಾರ್ಯಾಚರಣೆ ನಡೆಸುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.