ನವದೆಹಲಿ: ಮುಂದಿನ ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳೊಳಗೆ ಸ್ಥಳೀಯವಾಗಿ ತಯಾರಿಸಲಾದ ಸ್ಪುಟ್ನಿಕ್ ವಿ ಲಸಿಕೆಗಳು ಬಳಕೆಗೆ ಲಭ್ಯವಾಗಲಿದೆ ಎಂದು ಔಷಧ ತಯಾರಕ ಸಂಸ್ಥೆ ಡಾ. ರೆಡ್ಡೀಸ್ ಲ್ಯಾಬೊರೇಟರಿ ತಿಳಿಸಿದೆ.
ದೇಶದಲ್ಲಿನ ಔಷಧ ತಯಾರಕರು ಸ್ಪುಟ್ನಿಕ್ ವಿ ಲಸಿಕೆಯ ತಂತ್ರಜ್ಞಾನವನ್ನು ಅರಿತುಕೊಳ್ಳುವ ಮತ್ತು ತಯಾರಿಕಾ ವೇಗವನ್ನು ವೃದ್ಧಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಲಸಿಕೆ ಸೆಪ್ಟೆಂಬರ್ – ಅಕ್ಟೋಬರ್ ತಿಂಗಳಲ್ಲಿ ಲಭ್ಯವಾಗುವ ನಿರೀಕ್ಷೆ ಇರುವುದಾಗಿ ಅವರು ಹೇಳಿದ್ದಾರೆ.
ಪ್ರಸ್ತುತ ರಷ್ಯಾದಲ್ಲಿ ಕೊರೋನಾ ಸೋಂಕು ಹರಡುವ ಪ್ರಮಾಣ ಏರಿಕೆಯಾಗಿದ್ದುರ ಈ ಹಿನ್ನೆಲೆಯಲ್ಲಿ ಲಸಿಕೆಗಳನ್ನು ಇತರ ರಾಷ್ಟ್ರಗಳಿಗೆ ಕಳುಹಿಸುವುದಕ್ಕೆ ಹಿನ್ನಡೆಯಾಗಿದೆ. ಆಗಸ್ಟ್ ಅಂತ್ಯದಲ್ಲಿ ಈ ಪರಿಸ್ಥಿತಿಗಳು ನಿಯಂತ್ರಣವಾಗುವ ಸಾಧ್ಯತೆ ಇದೆ ಎಂದು ಡಾ. ರೆಡ್ಡೀಸ್ ಲ್ಯಾಬ್ ತಿಳಿಸಿದೆ. ಎಪ್ರಿಲ್ ತಿಂಗಳಲ್ಲಿ ಡಾ. ರೆಡ್ಡೀಸ್ ಲ್ಯಾಬ್ಗೆ ಸ್ಪುಟ್ನಿಕ್ ಲಸಿಕೆ ತಯಾರಿಸಲು ಅನುಮೋದನೆ ದೊರೆತಿದ್ದು, ಸದ್ಯ ಈ ಲಸಿಕೆಯನ್ನು ದೇಶದ ಸುಮಾರು 80 ನಗರಗಳಲ್ಲಿ ಬಿಡುಗಡೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.