ನವದೆಹಲಿ: ಭಾರತ ಪ್ರವಾಸದಲ್ಲಿರುವ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಅವರು, ಭಾರತದ ಕೊರೋನಾ ಲಸಿಕಾ ಅಭಿಯಾನಕ್ಕೆ 186 ಕೋಟಿ ರೂ. ನೆರವು ನೀಡುವುದಾಗಿ ಘೋಷಿಸಿದ್ದಾರೆ.
ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧಗಳಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ಭಾರತಕ್ಕೆ ಆಗಮಿಸಿರುವ ಅವರು, ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ವಿಚಾರವನ್ನು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಬ್ಲಿಂಕೆನ್ ಅವರು ಪ್ರಧಾನಿ ಮೋದಿ ಅವರನ್ನೂ ಭೇಟಿ ಮಾಡಿದ್ದು, ಎರಡೂ ರಾಷ್ಟ್ರಗಳ ಸಂಬಂಧ ವೃದ್ಧಿಗೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಹಾಗೆಯೇ ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯದಂತಹ ಮೌಲ್ಯಗಳ ವೃದ್ಧಿಗೆ ಭಾರತ ಮತ್ತು ಅಮೆರಿಕ ಬದ್ಧತೆ ಹೊಂದಿವೆ. ಅಮೆರಿಕದಲ್ಲಿರುವ ಭಾರತೀಯರು ಉಭಯ ದೇಶಗಳ ಬಾಂಧವ್ಯ ವೃದ್ಧಿಗೆ ನೀಡಿರುವ ಕೊಡುಗೆ ಅನನ್ಯ ಎಂದು ಅವರು ತಿಳಿಸಿದ್ದಾರೆ.
Good to meet US Secretary of State @SecBlinken today. I welcome President Biden's strong commitment to strengthen the India-US Strategic Partnership, which is anchored in our shared democratic values and is a force for global good. pic.twitter.com/HlNqKVTM95
— Narendra Modi (@narendramodi) July 28, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.