ನವದೆಹಲಿ: ಕೇಂದ್ರ ಸಚಿವ ಸಂಪುಟವು ವಿಮೆ ಮತ್ತು ಸಾಲ ಖಾತರಿ ನಿಗಮ ಮಸೂದೆ ಮತ್ತು ಸೀಮಿತ ಹೊಣೆಗಾರಿಕೆ ಸಹಭಾಗಿತ್ವ ತಿದ್ದುಪಡಿ ಮಸೂದೆಗೆ ಸಮ್ಮತಿ ನೀಡಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಈ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾದ ಅನುರಾಗ್ ಠಾಕೂರ್, ಎಲ್. ಮುರುಗನ್ ಅವರು ಮಾಹಿತಿ ನೀಡಿದ್ದು, ಕೇಂದ್ರ ಸಚಿವ ಸಂಪುಟದಿಂದ ಈ ತಿದ್ದುಪಡಿ ಮಸೂದೆಗೆ ಸಹಮತ ದೊರಕಿದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಲಾ, ಈ ತಿದ್ದುಪಡಿ ಬಳಿಕ ಬ್ಯಾಂಕ್ನಲ್ಲಿ ಹಣ ಕೂಡಿಟ್ಟವರಿಗೆ ಸಿಗುತ್ತಿದ್ದ 1 ಲಕ್ಷ ವಿಮೆಯನ್ನು 5 ಲಕ್ಷ ರೂ. ಗಳಿಗೆ ಏರಿಕೆ ಮಾಡಲಾಗುತ್ತದೆ. ಯಾವುದೇ ಬ್ಯಾಂಕುಗಳು ಮೊರಟೋರಿಯಂ ಅವಧಿಯಲ್ಲಿ ಇದ್ದಾಗ ಅವರಿಗೆ ಗ್ರಾಹಕರ ವ್ಯವಹಾರವನ್ನು ನಿರ್ವಹಣೆ ಮಾಡಲು ಸಾಧ್ಯವಾಗದಿದ್ದ ಸಮಯದಲ್ಲಿ ಇಲ್ಲಿ ಠೇವಣಿಯನ್ನು ಇಟ್ಟ ಗ್ರಾಹಕರು ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಷನ್ act- 1961 ತಿದ್ದುಪಡಿಯ ಮೂಲಕ 5 ಲಕ್ಷ ರೂ.ವರೆಗೆ ವಿಮಾ ಮೊತ್ತ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.