ನವದೆಹಲಿ: ಪ್ರಧಾನಿ ಮೋದಿ ಅವರ ದೂರದರ್ಶಿತ್ವದ ಮಾರ್ಗದರ್ಶನದಲ್ಲಿ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಐತಿಹಾಸಿಕ ನಿರ್ಣಯವೊಂದನ್ನು ಕೈಗೊಂಡಿದೆ.
ಈ ನಿರ್ಣಯದಂತೆ ದೇಶದ ವೈದ್ಯಕೀಯ, ಡೆಂಟಲ್ ಕೋರ್ಸ್ಗಳಾದ ಎಂಬಿಬಿಎಸ್, ಎಂಡಿ, ಎಂಎಸ್, ಡಿಪ್ಲೊಮಾ, ಬಿಡಿಎಸ್, ಎಂಡಿಎಸ್ ಮೊದಲಾದ ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ಒಬಿಸಿಗಳಿಗೆ 27% ಮೀಸಲಾತಿ ಮತ್ತು ಆರ್ಥಿಕ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ 10% ಮೀಸಲಾತಿ ನೀಡುವುದಾಗಿ ತಿಳಿಸಿದೆ.
ಈ ಮಹತ್ವದ ನಿರ್ಣಯದಿಂದ ಪ್ರತಿ ವರ್ಷ ಎಂಬಿಬಿಎಸ್ನಲ್ಲಿ ಸುಮಾರು 1500 ಒಬಿಸಿ, 550 EWS ವಿದ್ಯಾರ್ಥಿಗಳಿಗೆ, ಸ್ನಾತಕೋತ್ತರ ಪದವಿಯಲ್ಲಿ ಸುಮಾರು 2500 ವಿದ್ಯಾರ್ಥಿಗಳಿಗೆ, 1000 EWS ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಈಗಾಗಲೇ ಪರಿಶಿಷ್ಟ ಜಾತಿ/ ಪಂಗಡಗಳಿಗೆ ಮೀಸಲಾತಿ ಇದೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ಒಬಿಸಿ ಮತ್ತು ಇತರ ಆರ್ಥಿಕ ಹಿಂದುಳಿದ ವರ್ಗಗಳ ವೈದ್ಯಕೀಯ ಶಿಕ್ಷಣಕ್ಕೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಪ್ರಸ್ತುತ ಇರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಈ ನಿರ್ಣಯವು ಕೇಂದ್ರ ಸರ್ಕಾರ 2014 ರಿಂದ ವೈದ್ಯಕೀಯ ಶಿಕ್ಷಣ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕೈಗೊಂಡ ಹಲವು ಮಹತ್ವದ ಸುಧಾರಣೆಗಳಲ್ಲಿ ಒಂದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.