ನವದೆಹಲಿ: ಈ ತಿಂಗಳ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮ ಆಗಸ್ಟ್ 30 ರಂದು ನಡೆಯಲಿದ್ದು, ಇದರಲ್ಲಿ ಹಂಚಿಕೊಳ್ಳಬೇಕಾದ ವಿಷಯದ ಬಗ್ಗೆ ಸಲಹೆ ಸೂಚನೆಗಳನ್ನು ನೀಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ಜನತೆಗೆ ಮನವಿ ಮಾಡಿಕೊಂಡಿದ್ದಾರೆ.
ಅಲ್ಲದೇ ಮುಂದಿನ ಮನ್ ಕೀ ಬಾತ್ನಲ್ಲಿ ಮಾತನಾಡಬೇಕಾದ ವಿಷಯವನ್ನು ಆಯ್ಕೆ ಮಾಡುವಂತೆ ಟ್ವಿಟ್ ಮಾಡಿದ್ದಾರೆ.
‘ಆಗಸ್ಟ್ 30ರ ಮನ್ ಕೀ ಬಾತ್ ಕಾರ್ಯಕ್ರಮದ ಬಗ್ಗೆ ನಿಮ್ಮ ಬಳಿ ಸಾಕಷ್ಟು ಐಡಿಯಾ, ಸಲಹೆಗಳು ಇವೆ ಇದೆ ಎಂದು ನನಗೆ ತಿಳಿದಿದೆ, ನಿಮ್ಮ ಐಡಿಯಾಗಳನ್ನು https://t.co/0geo7fmUWx ನಲ್ಲಿ ಶೇರ್ ಮಾಡಿಕೊಳ್ಳಿ’ ಎಂದಿದ್ದಾರೆ.
ಈ ಹಿಂದಿನ ಕಾರ್ಯಕ್ರಮಗಳಲ್ಲಿ ಮೋದಿ ರೈತರು, ವಿದ್ಯಾರ್ಥಿಗಳು, ಶಿಕ್ಷಕರ ಬಗ್ಗೆ ಮಾತನಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.