ಟೊಕಿಯೋ: ಭಾರತೀಯ ಬ್ಯಾಡ್ಮಿಂಟನ್ ಪಟು ಪಿ. ವಿ. ಸಿಂಧು ಅವರು ಒಲಿಂಪಿಕ್ಸ್ 2020 ರಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಪಾನ್ನ ಅಕಾನೆ ಯಮಾಗುಚಿ ಅವರನ್ನು ಪರಾಜಯಗೊಳಿಸಿದ ಸಿಂಧು, ಆ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಆ ಮೂಲಕ ಭಾರತಕ್ಕೆ ಮತ್ತೊಂದು ಪದಕ ಗೆದ್ದು ಕೊಡುವ ಭರವಸೆಯನ್ನು ಮೂಡಿಸಿದ್ದಾರೆ.
ಯಮಾಗುಚಿ ಅವರನ್ನು 21 – 13, 22 – 20 ಅಂತರಗಳಿಂದ ಸಿಂಧು ಸೋಲಿಸಿದ್ದಾರೆ. ಆರಂಭದಿಂದಲೂ ಆಕ್ರಮಣಕಾರಿಯಾಗಿಯೇ ಆಟ ಆರಂಭಿಸಿದ ಸಿಂಧು, ಯಮಾಗುಚಿ ಅವರನ್ನು ಸೋಲಿಸಿ ವಿಜಯದ ನಗೆ ಬೀರಿದ್ದಾರೆ. ಆ ಮೂಲಕ ಭಾರತ ಒಲಿಂಪಿಕ್ಸ್ನಲ್ಲಿ ಮತ್ತೊಂದು ಪದಕ ಪಡೆಯುವ ಕನಸನ್ನು ಜೀವಂತವಾಗಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.