ನವದೆಹಲಿ: ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾವು ಮಾಡುವ ಭಾಷಣಕ್ಕೆ ಪೂರಕವಾಗುವಂತೆ ಸಾರ್ವಜನಿಕ ವಲಯದಿಂದ ಪ್ರಧಾನಿ ಮೋದಿ ಅವರು ಸಲಹೆ ಸೂಚನೆಗಳನ್ನು ಆಹ್ವಾನಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಕಛೇರಿ, ಆಗಸ್ಟ್ 15 ರ ಸ್ವಾತಂತ್ರ್ಯ ದಿನದ ಭಾಷಣಕ್ಕಾಗಿ ನಿಮ್ಮ ಆಲೋಚನೆಗಳು, ವಿಚಾರಗಳನ್ನು ಹಂಚಿಕೊಳ್ಳುವಂತೆ ತಿಳಿಸಿದ್ದಾರೆ. ನೀವು ನೀಡುವ ಸಲಹೆಗಳು ಕೆಂಪು ಕೋಟೆಯ ಗೋಡೆಗಳ ಮೇಲಿಂದ ಇಡೀ ದೇಶದಲ್ಲಿ ಪ್ರತಿನಿಧಿಸಲಿದೆ ಎಂದಿದೆ.
Your thoughts will reverberate from the ramparts of the Red Fort.
What are your inputs for PM @narendramodi’s speech on 15th August? Share them on @mygovindia. https://t.co/UCjTFU30XV
— PMO India (@PMOIndia) July 30, 2021
ಪ್ರಧಾನಿ ಅವರು ತಮ್ಮ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಸರ್ಕಾರದ ಕಾರ್ಯಕ್ರಮಗಳು, ನೀತಿಗಳನ್ನು ದೇಶವಾಸಿಗಳಿಗೆ ತಿಳಿಸಲಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಪ್ರಧಾನಿ ಮೋದಿ ನಾಗರಿಕರಿಂದ ಸಲಹೆ ಸೂಚನೆಗಳನ್ನು ಸಹ ಆಹ್ವಾನಿಸುತ್ತಾರೆ. ಈ ಬಾರಿಯೂ ಸಾರ್ವಜನಿಕ ಅಭಿಪ್ರಾಯಕ್ಕೆ ಒತ್ತು ನೀಡಿರುವ ಅವರು, ನವ ಭಾರತ ನಿರ್ಮಾಣಕ್ಕಾಗಿ ತಮ್ಮ ಕೊಡುಗೆಗಳನ್ನು ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.