ನವದೆಹಲಿ: ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಕಷ್ಟಕ್ಕೆ ತುತ್ತಾಗಿರುವ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಿರುವುದಾಗಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.
ಜಾಗತಿಕ ಮಟ್ಟದಲ್ಲಿ ಮಾನವ ಕಳ್ಳಸಾಗಣೆ ತಡೆಯುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಹಯೋಗದಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಇರಾನಿ ತಿಳಿಸಿದ್ದಾರೆ.
ಮಾನವ ಕಳ್ಳಸಾಗಣೆ (ತಡೆ, ರಕ್ಷಣೆ, ಪುನರ್ವಸತಿ) ಮಸೂದೆ – 2021 ಕ್ಕೆ ಅನುಮೋದನೆ ದೊರೆತಿದೆ. ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಸ್ಪರ ಸಹಕಾರ ಮನೋಭಾವಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿಯೂ ಕೆಲಸ ಮಾಡುತ್ತದೆ ಎಂದು ಅವರು ಹೇಳಿದ್ದಾರೆ. ಸಂಕಷ್ಟದಲ್ಲಿ ಇರುವ ಸಂತ್ರಸ್ತರನ್ನು ಗಮನದಲ್ಲಿಟ್ಟುಕೊಂಡು ಈ ಮಸೂದೆ ರೂಪಿಸಲಾಗಿದೆ. ಹಾಗೆಯೇ ಸಾಕ್ಷಿದಾರರಿಗೆ ಸುರಕ್ಷತೆ, ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಂತಹ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಜಿಲ್ಲೆಗಳಲ್ಲಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವ ಅಂಶಗಳನ್ನು ಸೇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.