ನವದೆಹಲಿ: ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆಯೊಂದನ್ನು.ನೀಡಿದ್ದು, ಇದರನ್ವಯ ರಾಜ್ಯದಲ್ಲಿನ ನಿರ್ಗತಿಕರು, ಭಿಕ್ಷುಕರು, ಅಲೆಮಾರಿಗಳಿಗೆ ಕೊರೋನಾ ಲಸಿಕೆ ಒದಗಿಸುವ ನಿಟ್ಟಿನಲ್ಲಿ ವಿಶೇಷ ಲಸಿಕಾ ಅಭಿಯಾನ ನಡೆಸಬೇಕು ಎಂದು ಹೇಳಿದೆ.
ಈ ಸಂಬಂಧ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.
ಈ ವಿಶೇಷ ಅಭಿಯಾನದಲ್ಲಿ ಎನ್ಜಿಒಗಳು, ಸಮಾಜ ಸೇವಾ ಸಂಸ್ಥೆಗಳು, ಸ್ವಯಂಸೇವಕರ ನೆರವನ್ನು ಪಡೆಯಬಹುದಾಗಿದೆ. ಎಲ್ಲಾ ವರ್ಗಗಳ ಜನರಿಗೆ ಲಸಿಕೆ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರಗಳು ಕಾರ್ಯ ನಿರ್ವಹಿಸಬೇಕು. ಈ ಲಸಿಕಾ ಅಭಿಯಾನ ಜನ ಕೇಂದ್ರಿತವಾಗಿರಬೇಕು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.