ನವದೆಹಲಿ: ಮುಂದಿನ ತಿಂಗಳಲ್ಲಿ ನಡೆಯಲಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರರ ಗುಂಪಿನ ಸಭೆಯಲ್ಲಿ ಉಗ್ರವಾದ, ಆಮೂಲಾಗ್ರೀಕರಣ, ಉಗ್ರರಿಗೆ ಹಣಕಾಸು ನೆರವು ನಿಗ್ರಹಕ್ಕೆ ಸಂಬಂಧಿಸಿದಂತೆ ಬ್ರಿಕ್ಸ್ ರಾಷ್ಟ್ರಗಳ ನಡುವೆ ಫಲಿತಾಂಶ ಆಧಾರಿತ ಸಹಕಾರ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಯೋಜನೆಯೊಂದನ್ನು ಅಳವಡಿಸಿಕೊಳ್ಳಲಾಗುತ್ತಿದೆ.
ಭಾರತದ ಅಧ್ಯಕ್ಷತೆಯಲ್ಲಿ ನಡೆದ ಬ್ರಿಕ್ಸ್ ರಾಷ್ಟ್ರಗಳ ಸಭೆಯಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯತಂತ್ರ ರೂಪಿಸಲಾಗಿದ್ದು, ಇದನ್ನು ಮುಂದಿನ ತಿಂಗಳು ನಡೆಯುವ ರಾಷ್ಟ್ರೀಯ ಭದ್ರತಾ ಸಲಹೆಗಾರರ ಸಭೆಯಲ್ಲಿ ಅಳವಡಿಸಿಕೊಳ್ಳಲಾಗುತ್ತದೆ ಎಂದು ಎಂಇಎ ಹೇಳಿದೆ.
ಬ್ರೆಜಿಲ್, ರಷ್ಯಾ, ಇಂಡಿಯಾ, ಚೀನಾ, ದಕ್ಷಿಣ ಆಫ್ರಿಕಾ ದೇಶಗಳ ಒಕ್ಕೂಟ ಇದಾಗಿದ್ದು, ಇದು 41% ಗಳಷ್ಟು ಜಾಗತಿಕ ಜನಸಂಖ್ಯೆ, 24% ಜಿಡಿಪಿ ಮತ್ತು 16% ಜಾಗತಿಕ ವ್ಯಾಪಾರವನ್ನು ಪ್ರತಿನಿಧಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.