ನವದೆಹಲಿ: ದೇಶ ಮೊದಲು ಎಂಬ ಧ್ಯೇಯ ನಿಮ್ಮ ಪ್ರತಿಯೊಂದು ಕಾರ್ಯಗಳಲ್ಲಿಯೂ ಪ್ರತಿಧ್ವನಿಸಬೇಕು. ಪೊಲೀಸ್ ಪಡೆಯ ಬಗ್ಗೆ ಜನರಿಗೆ ಸಕಾರಾತ್ಮಕ ಭಾವನೆ ಸೃಜಿಸುವಂತೆ ಕಾರ್ಯ ನಿರ್ವಹಿಸಬೇಕು ಎಂದು ಪ್ರಧಾನಿ ಮೋದಿ ತಿಳಿಸಿದರು.
ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರೊಬೆಷನರಿ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ, ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಪ್ರತಿಯೊಂದು ನಿರ್ಧಾರ, ಕೆಲಸಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಜನರಲ್ಲಿ ಪೊಲೀಸರ ಬಗೆಗಿರುವ ನಕಾರಾತ್ಮಕ ಗ್ರಹಿಕೆಯನ್ನು ಬದಲಾಯಿಸುವುದು ದೊಡ್ಡ ಸವಾಲು. ಅಂತಹ ಭಾವನೆಯನ್ನು ಸಕಾರಾತ್ಮಕವಾಗಿ ಬದಲಾಯಿಸಲು ಪೂರಕವಾಗುವಂತೆ ಕಾರ್ಯ ನಿರ್ವಹಿಸಲು ಅವರು ಸೂಚಿಸಿದ್ದಾರೆ. ದೇಶದ ಭದ್ರತೆ ಮತ್ತು ಉಗ್ರರ ವಿರುದ್ಧ ಹೋರಾಟದ ವೇಳೆ ನಮ್ಮ ಅನೇಕ ಪೊಲೀಸ್ ಸಿಬ್ಬಂದಿಗಳು ಪ್ರಾಣಾರ್ಪಣೆ ಮಾಡಿದ್ದಾರೆ. ಕೊರೋನಾ ಸಾಂಕ್ರಾಮಿಕ ಸಂಕಷ್ಟದ ವೇಳೆ ಮನೆ, ಮಠಗಳನ್ನು ಮರೆತು ಸಮಾಜದೊಂದಿಗೆ ನಿಂತಿದ್ದಾರೆ. ಆ ಮೂಲಕ ಜನರಲ್ಲಿ ಪೊಲೀಸರ ಮೇಲಿನ ಭಯ ಕೊಂಚ ಮಟ್ಟಿಗೆ ಕಡಿಮೆಯಾಗಿದೆ ಎಂದು ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.