ನವದೆಹಲಿ: ದೇಶದ ಸುಮಾರು 10 ರಾಜ್ಯಗಳಲ್ಲಿ ಕೊರೋನಾ ಪಾಸಿಟಿವಿಟಿ ದರ 10% ಗಳಿದ್ದು ,ಈ ಹಿನ್ನೆಲೆಯಲ್ಲಿ ಕಠಿಣ ನಿರ್ಬಂಧ ಅಗತ್ಯ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಜನರ ಓಡಾಟ, ಜನಸಂದಣಿ ಸೇರುವುದನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವಾಲಯ ಸೂಚಿಸಿದೆ. ದೇಶದ 46 ಜಿಲ್ಲೆಗಳಲ್ಲಿ 10% ಗಿಂತ ಅಧಿಕ ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ. ಸುಮಾರು 53% ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವಿಟಿ ದರ 5% ದಿಂದ 10% ವರೆಗಿದೆ. ಈ ಹಂತದಲ್ಲಿ ನಿರ್ಬಂಧ ಹೇರದಿದ್ದರೆ ಪರಿಸ್ಥಿತಿ ಹದೆಗೆಡುವ ಸಾಧ್ಯತೆ ಇದೆ ಎಂದು ಸಚಿವಾಲಯ ಹೇಳಿದೆ.
ಕೇರಳ, ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕ, ಒಡಿಶಾ, ಅಸ್ಸಾಂ, ಮೀಜೋರಂ, ಆಂಧ್ರಪ್ರದೇಶ ,ಮೇಘಾಲಯ, ಮಣಿಪುರಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ನಿಯಂತ್ರಣ ಕ್ರಮಗಳನ್ನು, ಕಣ್ಗಾವಲು ಅಗತ್ಯ. ನಿಯಂತ್ರಣ, ನಿರ್ವಹಣೆಯ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.