
ಬೆಂಗಳೂರು: ದೇಶದಲ್ಲಿಯೇ ಅತೀ ಹೆಚ್ಚು ಚಿರತೆಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.
ಮಧ್ಯಪ್ರದೇಶದಲ್ಲಿ 3,421 ಚಿರತೆಗಳಿದ್ದು, ಮೊದಲ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ 1783 ಚಿರತೆಗಳಿದ್ದು ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರದಲ್ಲಿ 1690 ಚಿರತೆಗಳಿವೆ ಎಂದು ನವದೆಹಲಿಯ ಭಾರತೀಯ ವನ್ಯಜೀವಿ ಸಂಸ್ಥೆ ವರದಿ ತಿಳಿಸಿದೆ.
ಕರ್ನಾಟಕದ ದಾಂಡೇಲಿ ಮತ್ತು ಅನಾಶಿ ಹುಲಿ ಪ್ರದೇಶಗಳಲ್ಲಿ 221 ಚಿರತೆಗಳಿವೆ ಎಂದು ಈ ವರದಿ ಹೇಳಿದೆ. ಬಂಡೀಪುರ ಮತ್ತು ನಾಗರಹೊಳೆಗಳಲ್ಲಿಯೂ ಉತ್ತಮ ಪ್ರಮಾಣದಲ್ಲಿ ಚಿರತೆಗಳಿವೆ ಎಂದು ವರದಿ ತಿಳಿಸಿದೆ. ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿಯೂ ಚಿರತೆಗಳಿರುವುದಾಗಿ ಈ ವರದಿ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


