
ನವದೆಹಲಿ: ಭಾರತ – ಆಸ್ಟ್ರೇಲಿಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸಲು, ಸಮಗ್ರ ಆರ್ಥಿಕ ಸಹಕಾರ ಒಪ್ಪಂದ (ಸಿಇಸಿಎ) ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಜೊತೆಗೆ ಚರ್ಚಿಸಲು ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಟೋನಿ ಅಬಾಟ್ ನಾಲ್ಕು ದಿನಗಳ ಪ್ರವಾಸಕ್ಕೆ ಭಾರತಕ್ಕೆ ಆಗಮಿಸಿದ್ದಾರೆ.
ಅಬಾಟ್ ಅವರು ಆಗಸ್ಟ್ 2 ರಿಂದ 6 ರ ವರೆಗೆ ಭಾರತದಲ್ಲಿ ಇರಲಿದ್ದಾರೆ. ಈ ಸಂದರ್ಭದಲ್ಲಿ ಉಭಯ ದೇಶಗಳ ದ್ವಿಪಕ್ಷೀಯ ಆರ್ಥಿಕ ಸಂಬಂಧ ವೃದ್ಧಿಗೆ ಭಾರತೀಯ ಮಂತ್ರಿಗಳು, ಉದ್ಯಮಿಗಳು, ಚಿಂತಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ಇದೇ ಸಂದರ್ಭದಲ್ಲಿ ಆಸ್ಟ್ರೇಲಿಯಾ ಹೈಕಮಿಷನರ್, ಆರ್ಥಿಕ ಮತ್ತು ವ್ಯಾಪಾರ ಸಂಬಂಧಗಳನ್ನು ಬಲಪಡಿಸಲು, ಭಾರಥದ ಜೊತೆಗೆ ಹೂಡಿಕೆ ಸಂಬಂಧಗಳನ್ನು ಬಲಪಡಿಸಲು ಉತ್ಸುಕವಾಗಿದೆ ಎಂದು ಹೇಳಿದ್ದಾರೆ. ಈ ಭೇಟಿ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಆರ್ಥಿಕ ಚೇತರಿಕೆಗೆ ನೆರವಾಗಲಿದೆ ಎಂದು ಆಸ್ಟ್ರೇಲಿಯಾ ಸರ್ಕಾರ ತಿಳಿಸಿದೆ. ಹಾಗೆಯೇ ಉಭಯ ರಾಷ್ಟ್ರಗಳ ದ್ವಿಪಕ್ಷೀಯ ಸಂಬಂಧ ಉತ್ತುಂಗದಲ್ಲಿದೆ. ನಮ್ಮ ಆರ್ಥಿಕ ಸಂಬಂಧಗಳ ವೃದ್ಧಿಗೆ ನಾವು ಬದ್ಧರಾಗಿದ್ದೇವೆ ಎಂದು ಆಸ್ಟ್ರೇಲಿಯಾ ಅಭಿಪ್ರಾಯ ವ್ಯಕ್ತಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


