
ಬೆಂಗಳೂರು: ರಾಜ್ಯ ಸರ್ಕಾರವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ನೌಕರರು, ಗ್ರಾಮ ಪಂಚಾಯತ್ ಸಿಬ್ಬಂದಿಗಳನ್ನು ಕೊರೋನಾ ವಾರಿಯರ್ಸ್ ಎಂದು ಘೋಷಿಸಿ ಆದೇಶ ಹೊರಡಿಸಿದೆ.
ಕೊರೋನಾ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳ ಕಾರ್ಯವನ್ನು ಗಣನೆಗೆ ತೆಗೆದುಕೊಂಡಿರುವ ರಾಜ್ಯ ಸರ್ಕಾರ ಅವರನ್ನು ಕೊರೋನಾ ವಾರಿಯರ್ಸ್ ಎಂದು ಘೋಷಿಸಿದೆ.
ಕೊರೋನಾ ಸಂದರ್ಭದಲ್ಲಿ ಇಲಾಖೆ ಸಾರ್ವಜನಿಕರಿಗೆ ಅಗತ್ಯ ಸೇವೆಗಳನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ. ಕೊರೋನಾ ಸೇವೆಗೆ ನಿಯೋಜನೆಯಾಗಿರುವ ಇಲಾಖೆ ಮತ್ತು ಪಂಚಾಯತ್ ಸಿಬ್ಬಂದಿಗಳನ್ನು ಕೊರೋನಾ ವಾರಿಯರ್ಸ್ ಎಂದು ಘೋಷಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಹಾಗೆಯೇ ಕೊರೋನಾ ಕರ್ತವ್ಯದ ವೇಳೆ ಈ ಸಿಬ್ಬಂದಿಗಳು ಮೃತಪಟ್ಟಲ್ಲಿ ಅವರ ಕುಟುಂಬಗಳಿಗೆ ಪರಿಹಾರ, ವೈದ್ಯಕೀಯ ವೆಚ್ಚ ಭರಿಸಲಾಗುವುದು ಎಂದು ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


