ನವದೆಹಲಿ: ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೆ 49.85 ಕೋಟಿ ಡೋಸ್ ಕೊರೋನಾ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕೇಂದ್ರ ಸರ್ಕಾರ ಈವರೆಗೆ ದೇಶದ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದಂತೆ 49,85,51,660 ಕೋಟಿ ಪ್ರಮಾಣಗಳಷ್ಟು ಕೊರೋನಾ ಲಸಿಕೆ ವಿತರಿಸಿದೆ. ಇದರಲ್ಲಿ ಸುಮಾರು 2,75,88,573 ಡೋಸ್ ಬಳಕೆಯಾಗದ ಕೊರೋನಾ ಲಸಿಕೆಗಳಿವೆ ಎಂದು ಸಚಿವಾಲಯ ಹೇಳಿದೆ. ಮುಂದಿನ ಕೆಲವೇ ದಿನಗಳಲ್ಲಿ 20,94,890 ಡೋಸ್ ಕೊರೋನಾ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.
ಕೊರೋನಾ ಹಿನ್ನೆಲೆಯಲ್ಲಿ ಜನವರಿ 16, 2021 ರಂದು ಕೊರೋನಾ ಲಸಿಕೆ ಅಭಿಯಾನ ಆರಂಭಿಸಲಾಗಿತ್ತು. ಆದ್ಯತೆಗೆ ಅನುಗುಣವಾಗಿ ಮೊದಲು ಆರೋಗ್ಯ ಕಾರ್ಯಕರ್ತರಿಗೆ, ವೈದ್ಯಕೀಯ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಗಿತ್ತು. ಹಾಗೆಯೇ ಎರಡನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಆ ಬಳಿಕ 45 ವರ್ಷ ಮೇಲ್ಪಟ್ಟವರಿಗೆ, 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆರಂಭಿಸಲಾಗಿದೆ. ಈ ವರೆಗೆ ಸುಮಾರು 47,85,44,114 ಜನರು ಕೊರೋನಾ ಲಸಿಕೆ ಪಡೆದಿದ್ದಾರೆ ಎಂದು ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.