ನವದೆಹಲಿ: ದೇಶದ ಸ್ವಾತಂತ್ರ್ಯ ದಿನ ಆಗಸ್ಟ್ 15 ರಂದು ಕೆಂಪುಕೋಟೆಯಲ್ಲಿ ನಡೆಯಲಿರುವ ಸಮಾರಂಭಕ್ಕೆ ವಿಶೇಷ ಅಭ್ಯಾಗತರನ್ನಾಗಿ ಈ ಬಾರಿಯ ಟೊಕಿಯೋ ಒಲಿಂಪಿಕ್ಸ್ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ತಂಡವನ್ನು ಪ್ರಧಾನಿ ಮೋದಿ ಅವರು ಆಹ್ವಾನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ಎಎನ್ಐ ಟ್ವೀಟ್ ಮಾಡಿದ್ದು, ಆಗಸ್ಟ್ 15 ರಂದು ಕೆಂಪುಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ಸಮಾರಂಭಕ್ಕೆ ಪ್ರಧಾನಿ ಮೋದಿ ಅವರು ಒಲಿಂಪಿಕ್ಸ್ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ತಂಡವನ್ನು ವಿಶೇಷ ಅತಿಥಿಗಳನ್ನಾಗಿ ಆಹ್ವಾನಿಸಿದ್ದಾರೆ.
ಆ ಸಮಯದಲ್ಲಿ ಎಲ್ಲಾ ಕ್ರೀಡಾಪಟುಗಳನ್ನು ವೈಯಕ್ತಿಕವಾಗಿ ಈ ಸಂದರ್ಭದಲ್ಲಿ ಮೋದಿ ಭೇಟಿ ಮಾಡಲಿದ್ದಾರೆ. ಅವರೊಂದಿಗೆ ಸಂವಹನ ನಡೆಸಲಿದ್ದಾರೆ ಎಂದು ಎಎನ್ಐ ತನ್ನ ಟ್ವೀಟ್ನಲ್ಲಿ ತಿಳಿಸಿದೆ.
On 15th August, Prime Minister Narendra Modi will invite the entire Indian Olympics contingent to the Red Fort as special guests. He will also personally meet and interact with all of them around that time.#Olympics pic.twitter.com/Sw0rbENdVb
— ANI (@ANI) August 3, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.