ನವದೆಹಲಿ: ಕೊರೋನಾ ಮಹಾಮಾರಿ ಸಂದರ್ಭದಲ್ಲಿ ದೇಶದ ಲಕ್ಷಾಂತರ ಬಡ ಜನರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂ-ಜಿಕೆಎವೈ) ಆಹಾರ ಭದ್ರತೆ ಒದಗಿಸಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಅವರು ಇಂದು ಆಹಾರ ಭದ್ರತಾ ಫಲಾನುಭವಿಗಳ ಜೊತೆಗೆ ವರ್ಚುವಲ್ ಸಂವಾದದಲ್ಲಿ ಭಾಗವಹಿಸಿ ಮಾತನಾಡಿ, ಪ್ರಸ್ತುತ ಪರಿಸ್ಥಿತಿಯಲ್ಲಿ ದೇಶದ ಲಕ್ಷಾಂತರ ಬಡ ಕುಟುಂಬಗಳಿಗೆ ಕೇಂದ್ರ ಸರ್ಕಾರ ಉಚಿತವಾಗಿ ಪಡಿತರ ವಿತರಣೆ ಮಾಡುತ್ತಿದೆ. ಇಂತಹ ಸಾಂಕ್ರಾಮಿಕ ಸಂದರ್ಭದಲ್ಲಿ ಬಡವರ ಚಿಂತೆಯನ್ನು ದೂರಮಾಡುವ ನಿಟ್ಟಿನಲ್ಲಿ ಈ ಯೋಜನೆ ಪೂರಕವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಎಲ್ಲಾ ರೀತಿಯ ನೆರವು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಇತ್ತೀಚೆಗೆ ಕಡಿಮೆ ಬೆಲೆಗೆ ಬಡವರಿಗೆ ಆಹಾರ ವಿತರಣೆ ಯೋಜನೆಗಳು, ಅದಕ್ಕಾಗಿ ಬಜೆಟ್ ಅನುದಾನ ಮೀಸಲಿಡುವುದು ಹೆಚ್ಚಾಗಿದೆ. ಆಹಾರ ಸಂಗ್ರಹಣೆ ಹೆಚ್ಚುತ್ತಿದ್ದರೂ, ಅಪೌಷ್ಟಿಕತೆ ಅನುಪಾತ ಕಡಿಮೆಯಾಗಿಲ್ಲ. ಎಲ್ಲರಿಗೂ ಪೌಷ್ಟಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.