ನವದೆಹಲಿ: ಭಾರತಕ್ಕೆ ಸುಮಾರು 6 ಸಾವಿರ ಕೋಟಿ ರೂ. ಮೊತ್ತದ ಹರ್ಪೂನ್ ಜಾಯಿಂಟ್ ಕಾಮನ್ ಟೆಸ್ಟ್ ಸೆಟ್ (ಜೆಸಿಟಿಎಸ್) ಮತ್ತು ಅದಕ್ಕೆ ಸಂಬಂಧಿಸಿದ ಉಪಕರಣಗಳನ್ನು ಒದಗಿಸಲು ಅಮೆರಿಕ ಸಮ್ಮತಿಸಿದೆ.
ಅಮೆರಿಕ ಸರ್ಕಾರ ಭಾರತಕ್ಕೆ ಕೋಟ್ಯಂತರ ರೂ. ಗಳ ಹರ್ಪೂನ್ ಕ್ಷಿಪಣಿಗಳನ್ನು ಮಾರಾಟ ಮಾಡಲು ಅನುಮೋದಿಸಿದೆ. ಈ ನಡೆ ಅಮೆರಿಕ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿಸುವ ನಿಟ್ಟಿನಲ್ಲಿ, ಇಂಡೋ – ಪೆಸಿಫಿಕ್ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸುವ ಉದ್ದೇಶದಿಂದ ಮಾಡಿಕೊಂಡ ಒಪ್ಪಂದವಾಗಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಅಗತ್ಯ ಅಧಿಸೂಚನೆಯನ್ನು ಪೆಂಟಗಾನ್ ರಕ್ಷಣಾ ಭದ್ರತಾ ಸಹಕಾರ ಸಂಸ್ಥೆ ಪೂರೈಕೆ ಮಾಡಿದೆ ಎಂದು ತಿಳಿದು ಬಂದಿದೆ. ಈ ಕ್ಷಿಪಣಿಯನ್ನು ಪ್ರಪಂಚದ 30 ಕ್ಕೂ ಅಧಿಕ ದೇಶಗಳ ರಕ್ಷಣಾ ಪಡೆಗಳಲ್ಲಿ ಈಗಾಗಲೇ ಬಳಕೆ ಮಾಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.