ಬೆಂಗಳೂರು: ರಾಜ್ಯ ಸರ್ಕಾರದ ನೂತನ ಸಚಿವರಾಗಿ ಇಂದು 29 ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 29 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲಾಗಿದೆ. ಈ ಬಾರಿ ಡಿಸಿಎಂ ಹುದ್ದೆ ಇಲ್ಲ. ಈ ಸಚಿವ ಸಂಪುಟವನ್ನು ಅನುಭವ ಮತ್ತು ಹೊಸ ಶಕ್ತಿಯ ಸಮ್ಮಿಶ್ರದ ಆಧಾರದಲ್ಲಿ ರಚನೆ ಮಾಡಿರುವುದಾಗಿ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ರಾಜ್ಯದ ಜನರ ಸಮಸ್ಯೆಗಳಿಗೆ ಸ್ಪಂದಿಸುವ, ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಲಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸೇರಿದಂತೆ ಹೈಕಮಾಂಡ್ ಮಾರ್ಗದರ್ಶನದಲ್ಲಿ ಜನಪರ ಆಡಳಿತ ನೀಡುವುದಕ್ಕೆ ಪೂರಕವಾಗಿ ಸಂಪುಟ ಸಚಿವರ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇಂದು ಮಧ್ಯಾಹ್ನ 2.15 ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ 29 ಮಂದಿ ಸಚಿವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.