
ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ಶಿಗ್ಗಾಂವಿಯಲ್ಲಿ ಶಾಶ್ವತ ಹೆಲಿಪ್ಯಾಡ್ ನಿರ್ಮಾಣವಾಗುತ್ತಿದೆ.
ಈ ಸಂಬಂಧ ಬೊಮ್ಮಾಯಿ ನಿವಾಸಕ್ಕೆ ಗುಪ್ತಚರ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು, ಹೆಲಿಪ್ಯಾಡ್ ನಿರ್ಮಾಣಕ್ಕೆ 2 ಸಂಭಾವ್ಯ ಪ್ರದೇಶಗಳನ್ನು ಗುರುತು ಮಾಡಿದ್ದಾರೆ. ಒಂದು ಪ್ರದೇಶ ಕಂದಾಯ ಭೂಮಿಯಲ್ಲಿದ್ದು, ಮತ್ತೊಂದು ಖಾಸಗಿ ಒಡೆತನದ ಭೂಮಿಯಲ್ಲಿ ಗುರುತು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನದಂದೇ ಹೆಲಿಪ್ಯಾಡ್ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಈ ಹೆಲಿಪ್ಯಾಡ್ ಅನ್ನು ಸಿಎಂ ಬೊಮ್ಮಾಯಿ ಮಾತ್ರವಲ್ಲದೆ ವಿಐಪಿಗಳು ಸಹ ಬಳಕೆ ಮಾಡಬಹುದಾಗಿದೆ. ಹಾಗೆಯೇ ಆರೋಗ್ಯ ಸಂಬಂಧಿ ತುರ್ತು ಅವಶ್ಯಕತೆಗಳ ಸಂದರ್ಭದಲ್ಲಿಯೂ ಈ ಹೆಲಿಪ್ಯಾಡ್ ಬಳಕೆ ಮಾಡಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


