
ನವದೆಹಲಿ: 2018 ರ ಮೇ ಯಿಂದ 2021 ರ ಜೂನ್ ವರೆಗಿನ ಅವಧಿಯಲ್ಲಿ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿರುವ ಸುಮಾರು 400 ಎನ್ಕೌಂಟರ್ನಲ್ಲಿ 630 ಉಗ್ರಗಾಮಿಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಕೇಂದ್ರ ಸಚಿವ ನಿತ್ಯಾನಂದ ರೇ ಅವರು ತಿಳಿಸಿದ್ದಾರೆ.
ಹಾಗೆಯೇ ಈ ಕಾರ್ಯಾಚರಣೆಗಳ ಸಂದರ್ಭದಲ್ಲಿ 85 ಮಂದಿ ಯೋಧರು ಹುತಾತ್ಮರಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರ ಉಗ್ರಗಾಮಿಗಳು ಮತ್ತು ಭಯೋತ್ಪಾದಕ ಚಟುವಟಿಕೆಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಅಳವಡಿಸಿಕೊಂಡಿರುವುದಾಗಿಯೂ ರೇ ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರ ಭದ್ರತಾ ವಲಯಕ್ಕೆ ಸಂಬಂಧಿಸಿದಂತೆ ಭದ್ರತಾ ಸಾಧನಗಳ ಬಲಪಡಿಸುವಿಕೆ, ದೇಶ ವಿರೋಧಿ ಕುಕೃತ್ಯಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜಾರಿಗೊಳಿಸುವುದು, ಶೋಧ ಕಾರ್ಯಾಚರಣೆಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳುವುದು, ತೀವ್ರ ಎಚ್ಚರ ವಹಿಸಲು ಪೂರಕವಾಗಿ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಭಯೋತ್ಪಾದನೆ, ಭಯೋತ್ಪಾದಕರು ಒಡ್ಡುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಭದ್ರತಾ ಪಡೆಗಳಗೆ ಅಗತ್ಯ ಸಹಕಾರವನ್ನು ಸರ್ಕಾರ ನೀಡುತ್ತಿದೆ. ಭಯೋತ್ಪಾದನೆ, ಭಯೋತ್ಪಾದಕರಿಗೆ ಬೆಂಬಲ ನೀಡುವವರು, ಅವರಿಗೆ ನೆರವಾಗುವವರ ವಿರುದ್ಧವೂ ಭದ್ರತಾ ಪಡೆಗಳು ತೀವ್ರ ನಿಗಾ ವಹಿಸಿರುವುದಾಗಿ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


