ಟೊಕಿಯೋ: ಜಪಾನ್ನ ಟೊಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ 2020 ರಲ್ಲಿ ಭಾರತೀಯ ಪುರುಷರ ಹಾಕಿ ತಂಡ ಕಂಚಿನ ಪದಕವನ್ನು ಗೆದ್ದಿದೆ.
ನಾಲ್ಕು ದಶಕಗಳ ಬಳಿಕ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಪದಕ ಬಂದಿದೆ. ಈ ಪಂದ್ಯದಲ್ಲಿ ಜರ್ಮನಿ ತಂಡವನ್ನು ಪರಾಜಯಗೊಳಿಸಿದ ಭಾರತದ ಹಾಕಿ ಟೀಂ ಕಂಚಿನ ಪದಕ ಗೆಲ್ಲುವ ಮೂಲಕ ದೇಶದ ಹಿರಿಮೆಯನ್ನು ಹೆಚ್ಚಿಸಿದೆ.
ಈ ಪಂದ್ಯವನ್ನು ಭಾರತೀಯ ತಂಡ 5-4 ಗೋಲುಗಳ ಅಂತರದಲ್ಲಿ ಜಯಿಸಿದೆ. ಆ ಮೂಲಕ 1980 ರ ಬಳಿಕ ಇದೇ ಮೊದಲ ಬಾರಿಗೆ ಒಲಿಂಪಿಕ್ನ ಹಾಕಿಯಲ್ಲಿ ಭಾರತಕ್ಕೆ ಪದಕ ಬಂದಿದೆ.
ಪ್ರಧಾನಿ ಮೋದಿ ಅವರು ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಕಂಚಿನ ಪದಕ ಅರ್ಪಿಸಿದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಇದು ಪ್ರತಿಯೊಬ್ಬ ಭಾರತೀಯನ ಸ್ಮರಣೆಯಲ್ಲಿ ಉಳಿಯುವ ಐತಿಹಾಸಿಕ ದಿನ. ಮನೆಗೆ ಕಂಚು ತಂದ ಪುರುಷರ ಹಾಕಿ ತಂಡಕ್ಕೆ ಅಭಿನಂದನೆಗಳು. ಈ ತಂಡದ ಬಗ್ಗೆ ದೇಶವೇ ಹೆಮ್ಮೆ ಪಡುತ್ತದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
Historic! A day that will be etched in the memory of every Indian.
Congratulations to our Men’s Hockey Team for bringing home the Bronze. With this feat, they have captured the imagination of the entire nation, especially our youth. India is proud of our Hockey team. 🏑
— Narendra Modi (@narendramodi) August 5, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.