ಬೆಂಗಳೂರು: ಬೆಂಗಳೂರಿಗೆ ಆಗಮಿಸುವವರು ಎರಡು ಡೋಸ್ ಲಸಿಕೆಗಳನ್ನು ಪಡೆದಿದ್ದರೂ ಸಹ, ಆರ್ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರಲೇ ಬೇಕು ಎಂದು ಬಿಬಿಎಂಪಿ ತಿಳಿಸಿದೆ.
ಈ ಸಂಬಂಧ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಅವರು ಮಾತನಾಡಿದ್ದು, ಎರಡೂ ಡೋಸ್ ಕೊರೋನಾ ಲಸಿಕೆಯ ಡೋಸ್ಗಳನ್ನು ಪಡೆದರೂ, ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಳೊಳಗಿನ ಆರ್ಟಿಪಿಸಿಆರ್ ನೆಗೆಟಿವ್ ವರದಿಯನ್ನು ಹೊಂದಿರಬೇಕು. ಇಲ್ಲವಾದರೆ ಸ್ವ್ಯಾಬ್ ಸಂಗ್ರಹಿಸಿ ಅದರ ಪರೀಕ್ಷಾ ವರದಿ ಬರುವಲ್ಲಿಯ ವರೆಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯವಾಗುತ್ತದೆ ಎಂದು ಹೇಳಿದ್ದಾರೆ.
ಹಾಗೆಯೇ ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೊರೋನಾ ಮಾನದಂಡಗಳನ್ನು ಪಾಲಿಸುವುದಕ್ಕೆ ಪೂರಕವಾಗಿ ವಾಣಿಜ್ಯ ಕಟ್ಟಡಗಳಲ್ಲಿ ಮಾರ್ಷಲ್ಗಳನ್ನು ನೇಮಕ ಮಾಡಲಾಗುತ್ತದೆ. ಕೊರೋನಾ ನಿಯಮಗಳನ್ನು ಗಾಳಿಗೆ ತೂರಿದಲ್ಲಿ ಈ ಮಾರ್ಷಲ್ಗಳು, ಹೋಂ ಗಾರ್ಡ್, ಪೊಲೀಸರು ದಂಡ ವಿಧಿಸಲಿದ್ದಾರೆ ಎಂದು ಹೇಳಿದ್ದಾರೆ.
ಅಪಾರ್ಟ್ಮೆಂಟ್ಗಳಲ್ಲಿ ಕೊರೋನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆಯೂ ಅವರು ತಿಳಿಸಿದ್ದಾರೆ. ಮಾಸ್ಕ್ ಧರಿಸುವ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಕೊರೋನಾ ನಿಯಂತ್ರಣ ಮಾಡುವಂತೆಯೂ ಅವರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.