ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭಾರತದ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲಿಸ್ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ರಾಜ್ಯದಲ್ಲಿ ಹೂಡಿಕೆ ಸ್ನೇಹಿ ವಾತಾವರಣ ಇದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು, ಹೂಡಿಕೆಗೆ ಪೂರಕ ವಾತಾವರಣ ಹೊಂದಿದೆ. ತಂತ್ರಜ್ಞಾನ, ಶಿಕ್ಷಣದಲ್ಲಿಯೂ ರಾಜ್ಯ ಮುಂದಿದೆ. ಮಾನವ ಸಂಪನ್ಮೂಲ ಸಹ ಇದ್ದು, ಹಲವು ಪ್ರತಿಷ್ಠಿತ ಕಂಪೆನಿಗಳಿಗೆ ನೆಲೆಯಾಗಿದೆ ಎಂದು ಅವರು ಕಮಿಷನರ್ಗೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಆರೋಗ್ಯ, ಸಂಸ್ಕೃತಿ, ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಸಂಶೋಧನೆ, ಅಭಿವೃದ್ಧಿ ಕಾರ್ಯಗಳನ್ನು ನಡೆಯುತ್ತಿರುತ್ತವೆ. ವಿವಿಧ ಬಹುರಾಷ್ಟ್ರೀಯ ಕಂಪೆನಿಗಳ ಜೊತೆಗೆ , ಹೈಟೆಕ್ ಸಂಶೋಧನಾ ಸಂಸ್ಥೆಗಳೂ ಇಲ್ಲಿ ಕಾರ್ಯ ನಿರ್ವಹಿಸುತ್ತವೆ. ಸಿಲಿಕಾನ್ ವ್ಯಾಲಿ ಎಂದೇ ಹೆಸರಾಗಿರುವ ಬೆಂಗಳೂರು ನಗರ ದೇಶ, ವಿದೇಶಗಳ ಜನರಿಗೆ ನೆಲೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಆರೋಗ್ಯ, ಶಿಕ್ಷಣ ಮತ್ತು ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆಯೂ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.