ನವದೆಹಲಿ: ಈ ವರೆಗೆ ದೇಶದಲ್ಲಿ ಒಟ್ಟು 49 ಕೋಟಿ ಡೋಸ್ ಕೊರೋನಾ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಗುರುವಾರ 50.29 ಲಕ್ಷಕ್ಕೂ ಅಧಿಕ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ. 18 – 44 ವರ್ಷಗಳೊಳಗಿನ 27,26,494 ಫಲಾನುಭವಿಗಳಿಗೆ ಮೊದಲ ಡೋಸ್, 4,81,823 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಇದರೊಂದಿಗೆ ದೇಶದಲ್ಲಿ ಮೂರನೇ ಹಂತದ ಲಸಿಕಾ ಅಭಿಯಾನ ಆರಂಭವಾದಂದಿನಿಂದಲೂ 18 ವರ್ಷದಿಂದ 44 ವರ್ಷಗಳೊಳಗಿನ 16,92,68,754 ಜನರು ಮೊದಲ ಡೋಸ್ ಮತ್ತು 1,07,72,537 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.
ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನ, ಉತ್ತರ ಪ್ರದೇಶದಲ್ಲಿ 18 – 44 ರ ವಯೋಮಿತಿಯೊಳಗಿನ ಫಲಾನುಭವಿಗಳಿಗೆ ಒಂದು ಕೋಟಿಗೂ ಅಧಿಕ ಲಸಿಕೆಗಳನ್ನು ವಿತರಿಸಲಾಗಿದೆ. ಆಂಧ್ರಪ್ರದೇಶ, ಅಸ್ಸಾಂ, ಛತ್ತೀಸ್ಘಢ, ನವದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ್, ಪ. ಬಂಗಾಳಗಳಲ್ಲಿ 18-44 ರ ವಯೋಮಾನದ 10 ಲಕ್ಷಕ್ಕೂ ಹೆಚ್ಚು ಜನರು ಕೊರೋನಾ ಲಸಿಕೆ ಪಡೆದುಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.