ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ದೇಶಾದ್ಯಂತ 1,12,95,047 ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಮಂಜೂರು ಮಾಡಲಾದ ಮನೆಗಳ ಪೈಕಿ 84,67,568 ಮನೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದೆ. 50,16,642 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಮತ್ತು ಅವುಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಗಿದೆ. ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳು ನೀಡಿದ ಬೇಡಿಕೆಗನುಗುಣವಾಗಿ ಈ ಮನೆಗಳನ್ನು ಮಂಜೂರು ಮಾಡಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಈ ಸಂಬಂಧ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದ್ದು, ಈಗಾಗಲೇ 50 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ದೇಶಾದ್ಯಂತ ಮನೆ ವಿತರಣೆ ಮಾಡಲಾಗಿದೆ. ಹಾಗೆಯೇ ಮತ್ತಷ್ಟು ಫಲಾನುಭವಿಗಳಿಗೆ ಒದಗಿಸಲು ಮತ್ತಷ್ಟು ಮನೆಗಳ ನಿರ್ಮಾಣ ಕಾರ್ಯ ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದೆ ಎಂದು ತಿಳಿಸಿದೆ. ಎಲ್ಲರಿಗೂ ವಸತಿ ಎಂಬ ಧ್ಯೇಯದಡಿ ಈ ಯೋಜನೆಯನ್ನು ಯಶಸ್ವಿಯಾಗಿ ಸರ್ಕಾರ ನಡೆಸಿಕೊಂಡು ಬರುತ್ತಿದೆ ಎಂದು ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.