ನವದೆಹಲಿ: ಜಪಾನ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ನಲ್ಲಿ ಭಾಗವಹಿಸಿ, ದೇಶದ ಹಿರಿಮೆಯನ್ನು ಹೆಚ್ಚಿಸಿದ ಮಹಿಳಾ ಹಾಕಿ ತಂಡದ ಶ್ರಮಕ್ಕೆ ಪ್ರಧಾನಿ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಟೊಕಿಯೋ ಒಲಿಂಪಿಕ್ಸ್ 2020 ರಲ್ಲಿ ನಮ್ಮ ಮಹಿಳಾ ಹಾಕಿ ತಂಡದ ಅತ್ಯುತ್ತಮ ಪ್ರದರ್ಶನಗಳನ್ನು ನಾವು ಸದಾ ಸ್ಮರಿಸಿಕೊಳ್ಳುತ್ತೇವೆ. ಪಂದ್ಯಾವಳಿಗಳುದ್ದಕ್ಕೂ ಅವರು ಉತ್ತಮ ಪ್ರದರ್ಶನವನ್ನೇ ನೀಡಿದ್ದಾರೆ. ತಂಡದ ಪ್ರತಿಯೊಬ್ಬ ಆಟಗಾರನೂ ಧೈರ್ಯ, ಕೌಶಲ್ಯ, ಸ್ಥಿತಿಸ್ಥಾಪಕತ್ವ ಮನೋಭಾವ ಹೊಂದಿದ್ದಾರೆ. ಈ ಮಹೋನ್ನತ ತಂಡದ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ ಎಂದು ಹೇಳಿದ್ದಾರೆ.
ಭಾರತದ ಮಹಿಳಾ ಹಾಕಿ ತಂಡ ಪದಕ ಕಳೆದುಕೊಂಡಿರಬಹುದು. ಆದರೆ, ಈ ತಂಡ ದೇಶದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಈ ಒಲಿಂಪಿಕ್ಸ್ನಲ್ಲಿ ಭಾಗವಹಿಸಿದ ಭಾರತದ ಮಹಿಳಾ ಹಾಕಿ ತಂಡ ಮತ್ತಷ್ಟು ಹೆಣ್ಣು ಮಕ್ಕಳಿಗೆ ಹಾಕಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು, ಸಾಧನೆ ಮೆರೆಯಲು ಪ್ರೇರಣೆ ನೀಡುತ್ತದೆ. ಈ ತಂಡದ ಬಗ್ಗೆ ನಮಗೆ ಹೆಮ್ಮೆ ಇದೆ ಎಂದಿದ್ದಾರೆ. ಹಾಗೆಯೇ ಹಾಕಿಯಲ್ಲಿ ಕ್ರಿಶನ್ ಪಾಠಕ್ ಅವರ ಪ್ರಯತ್ನ ಮತ್ತು ಸಮರ್ಪಣಾ ಭಾವ ಮೌಲ್ಯಯುತವಾದದ್ದು. ವಿವಿಧ ಪಂದ್ಯಾವಳಿಗಳಲ್ಲಿ ಅವರು ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ಅವರ ಮುಂದಿನ ಪ್ರಯತ್ನಗಳಿಗಾಗಿ ಶುಭಹಾರೈಸುವುದಾಗಿ ತಿಳಿಸಿದ್ದಾರೆ.
We narrowly missed a medal in Women’s Hockey but this team reflects the spirit of New India- where we give our best and scale new frontiers. More importantly, their success at #Tokyo2020 will motivate young daughters of India to take up Hockey and excel in it. Proud of this team.
— Narendra Modi (@narendramodi) August 6, 2021
We will always remember the great performance of our Women’s Hockey Team at #Tokyo2020. They gave their best throughout. Each and every member of the team is blessed with remarkable courage, skill and resilience. India is proud of this outstanding team.
— Narendra Modi (@narendramodi) August 6, 2021
The efforts and dedication of Krishan Pathak towards Hockey are deeply valued. He has distinguished himself in various tournaments. I would like to convey my best wishes to him for his future endeavours.
— Narendra Modi (@narendramodi) August 5, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.