ನವದೆಹಲಿ: ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಆರ್ಗನೈಸೇಷನ್ ಆಫ್ ಇಸ್ಲಾಮಿಕ್ ಕಾರ್ಪೊರೇಷನ್ಗೆ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿರುಗೇಟು ನೀಡಿದೆ.
ತನ್ನ ಹಿತಾಸಕ್ತಿಗಳಿಗಾಗಿ ಭಾರತದ ಆಂತರಿಕ ವಿಚಾರಗಳ ಬಗ್ಗೆ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದೆ. ಜಮ್ಮು ಕಾಶ್ಮೀರದ 370 ನೇ ವಿಧಿ ರದ್ಧತಿಗೆ ಎರಡು ವರ್ಷಗಳಾಗಿದೆ. ಈ ಸಂದರ್ಭದಲ್ಲಿ ಒಐಸಿಯ ಪ್ರಧಾನ ಕಾರ್ಯದರ್ಶಿಯು ಜಮ್ಮು ಕಾಶ್ಮೀರದ ಸಮಸ್ಯೆಗಳನ್ನು ಪರಿಹರಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳಿಗೆ ಅನುಗುಣವಾಗಿ ಪ್ರಯತ್ನಗಳನ್ನು ಹೆಚ್ಚಿಸುವಂತೆ ಅಂತರರಾಷ್ಟ್ರೀಯ ಸಮುದಾಯಗಳಿಗೆ ಕರೆ ನೀಡಿದ್ದರು.
ಈ ಹೇಳಿಕೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿರುಗೇಟು ನೀಡಿದ್ದು, ಒಐಸಿ ಪ್ರಧಾನ ಕಾರ್ಯದರ್ಶಿ ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದಂತೆ ನೀಡಿರುವ ಸ್ವೀಕಾರಾರ್ಹವಲ್ಲದ ಹೇಳಿಕೆಯನ್ನು ನಾವು ಸ್ಪಷ್ಟವಾಗಿ ತಿರಸ್ಕರಿಸುತ್ತೇವೆ. ಭಾರತದ ಆಂತರಿಕ ವಿಚಾರಗಳಿಗೆ ಸಂಬಂಧಿಸಿದಂತೆ ಟೀಕಿಸಲು ಇಂತಹ ವೇದಿಕೆಗಳನ್ನು ಬಳಕೆ ಮಾಡುವ ಪಟ್ಟಭದ್ರ ಹಿತಾಸಕ್ತಿಗಳಿಗೆ ಅವಕಾಶ ನೀಡುವುದನ್ನು ತಡೆಯಬೇಕು ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.