ಮಂಗಳೂರು: ರಾಜ್ಯ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ವಿ. ಸುನಿಲ್ ಕುಮಾರ್ ಅವರು ಮಾದರಿ ನಡೆಯೊಂದಕ್ಕೆ ಸಾಕ್ಷಿಯಾಗಿದ್ದಾರೆ.
ಸಚಿವರಾಗಿರುವುದಕ್ಕೆ ತಮಗೆ ಅಭಿನಂದನೆ ಸಲ್ಲಿಸುವವರು ಹಾರ, ತುರಾಯಿಗಳನ್ನು ತರಬೇಡಿ. ಅದರ ಬದಲಿಗೆ ಕೊಡಲೇ ಬೇಕು ಎಂದಿದ್ದರೆ ಪುಸ್ತಕಗಳನ್ನು ನೀಡಿ. ಆ ಪುಸ್ತಕಗಳನ್ನು ಕಾರ್ಕಳದ ಗ್ರಂಥಾಲಯಕ್ಕೆ ನೀಡುತ್ತೇನೆ ಎಂದು ಅವರು ತಮ್ಮ ಫೇಸ್ಬುಕ್ ಮೂಲಕ ಬರೆದುಕೊಂಡಿದ್ದಾರೆ.
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಮತ್ತು ತಮ್ಮ ಕ್ಷೇತ್ರ ಕಾರ್ಕಳಕ್ಕೆ ಅವರು ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯಕರ್ತರು, ಹಿತೈಷಿಗಳು ಅಭಿನಂದನಾ ಸಮಾರಂಭಗಳಲ್ಲಿ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆಯೂ ಅವರು ಸೂಚಿನೆ ನೀಡಿದ್ದು, ಆ ಮೂಲಕ ಸಹಕರಿಸುವಂತೆಯೂ ಅವರು ಮನವಿ ಮಾಡಿಕೊಂಡಿದ್ದಾರೆ.
ಕೊರೋನಾ ನಿಯಮಾವಳಿಗಳ ಉಲ್ಲಂಘನೆ ಮೂಲಕ ಅಪಾಯಕ್ಕೆ ಆಹ್ವಾನ ನೀಡುವುದು ಬೇಡ. ವೈಯಕ್ತಿಕವಾಗಿಯೂ ಹಾರ, ತುರಾಯಿಗಳನ್ನು ನಾನು ಸ್ವೀಕರಿಸುವುದಿಲ್ಲ. ದಯಮಾಡಿ ಎಲ್ಲರೂ ಅರಿತುಕೊಂಡು ವ್ಯವಸ್ಥೆಯ ಜೊತೆಗೆ ಸಹಕರಿಸೋಣ ಎಂದು ಹೇಳುವ ಮೂಲಕ ಸುನಿಲ್ ಕುಮಾರ್ ಇತರರಿಗೂ ಮಾದರಿಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.