ಶ್ರೀನಗರ: ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರಗಾಮಿಗಳ ಸಂಹಾರವಾಗಿದೆ.
ಜಿಲ್ಲೆಯ ತಾಣಮಂಡಿ ಅರಣ್ಯ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಒಟ್ಟು ನಾಲ್ವರು ಉಗ್ರರು ಈ ಗುಂಪಿನಲ್ಲಿದ್ದು, ಇಬ್ಬರು ವಿದೇಶೀಯರು ಎಂದು ತಿಳಿದು ಬಂದಿದೆ. ಕಾಶ್ಮೀರದ ಭಾಗದಿಂದ ಈ ಭಯೋತ್ಪಾದಕರು ರಜೌರಿಗೆ ಬಂದಿರುವ ಗುಮಾನಿ ಇರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಒಂದು ತಿಂಗಳಿಂದೀಚೆಗೆ ಭದ್ರತಾ ಪಡೆಗಳು ಉಗ್ರರ ನೆಲೆಗಳನ್ನು ಹುಡುಕುವ ಕಾರ್ಯಾಚರಣೆ ನಡೆಸುತ್ತಿವೆ. ಇಂದು ಈ ನೆಲೆ ಪತ್ತೆಯಾಗಿದ್ದು, ಈ ಸಂದರ್ಭದಲ್ಲಿ ಪರಸ್ಪರ ಗುಂಡಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ಭಯೋತ್ಪಾದಕರನ್ನು ಯಮಪುರಿಗಟ್ಟಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.