ಶ್ರೀನಗರ: ಜಮ್ಮು ಕಾಶ್ಮೀರದ ಬುದ್ಗಾಂ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನ ಸಂಹಾರವಾಗಿದೆ.
ಜಿಲ್ಲೆಯ ಮಚುವಾ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ. ಈ ಸಂದರ್ಭದಲ್ಲಿ ಅವಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಎನ್ಕೌಂಟರ್ ದಾಳಿ ಆರಂಭಿಸಿದ ಭದ್ರತಾ ಪಡೆಗಳ ಗುಂಡಿಗೆ ಓರ್ವ ಉಗ್ರ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಧಿಸಲ್ಪಟ್ಟ ಉಗ್ರನಿಂದ ಎಕೆ-47 ರೈಫಲ್, ಒಂದು ಪಿಸ್ತೂಲ್ ಅನ್ನು ವಶಕ್ಕೆ ಪಡೆಯಲಾಗಿದೆ. ಪ್ರದೇಶದಲ್ಲಿ ಮತ್ತಷ್ಟು ಉಗ್ರರಿರುವ ಸಂದೇಹವಿದ್ದು, ಕಾರ್ಯಾಚರಣೆ ಮುಂದುವರಿದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.