ನವದೆಹಲಿ: ದೇಶದಲ್ಲಿ ಕೊರೋನಾ ಲಸಿಕೆ ವಿತರಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಲಾಗಿದ್ದು, ಈಗಾಗಲೇ 50 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ. ಈ ಸಂಬಂಧ ಪ್ರಧಾನಿ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದೇಶದಲ್ಲಿ ಕೊರೋನಾ ಲಸಿಕೆ ವಿತರಣೆಯ ಸಂಖ್ಯೆ 50 ಕೋಟಿ ಡೋಸ್ ದಾಟಿದ್ದು, ಕೊರೋನಾ ಹೋರಾಟದಲ್ಲಿ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಉತ್ತೇಜನ ದೊರೆತಂತಾಗಿದೆ. ಎಲ್ಲರಿಗೂ ಉಚಿತ ಲಸಿಕೆ ಧ್ಯೇಯದಡಿ ನಮ್ಮ ದೇಶದ ನಾಗರಿಕರಿಗೆ ಲಸಿಕೆ ನೀಡಲಾಗಿರುವುದಾಗಿ ಭಾವಿಸುತ್ತೇನೆ ಎಂದು ಹೇಳಿದ್ದಾರೆ.
India’s fight against COVID-19 receives a strong impetus. Vaccination numbers cross the 50 crore mark. We hope to build on these numbers and ensure our citizens are vaccinated under #SabkoVaccineMuftVaccine movement.
— Narendra Modi (@narendramodi) August 6, 2021
ಶುಕ್ರವಾರ ದೇಶದಲ್ಲಿ ಸುಮಾರು 43.29 ಲಕ್ಷ ಡೋಸ್ ಲಸಿಕೆಗಳನ್ನು ನೀಡಲಾಗಿದ್ದು, ಬೃಹತ್ ಕೊರೋನಾ ಲಸಿಕೆ ಅಭಿಯಾನದಲ್ಲಿ ಈವರೆಗೆ ದೇಶದಲ್ಲಿ 50 ಕೋಟಿ ಡೋಸ್ ಲಸಿಕೆಗಳ ವಿತಯಣೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಸರ್ವರಿಗೂ ಉಚಿತ ಲಸಿಕೆ ಧ್ಯೇಯದಡಿ ಭಾರತ ಈ ಐತಿಹಾಸಿಕ ಸಾಧನೆ ಮೆರೆದಿದೆ ಎಂದು ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.