ಟೊಕಿಯೋ: ಜಪಾನ್ನ ಟೊಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ 2020 ಯ ಗಾಲ್ಫ್ ಕ್ರೀಡೆಯಲ್ಲಿ ಭಾರತದ, ಕರ್ನಾಟಕದ ಕ್ರೀಡಾಪಟು ಅದಿತಿ ಅಶೋಕ್ ನಾಲ್ಕನೇ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇದೇ ಮೊದಲ ಬಾರಿಗೆ ಒಲಿಂಪಿಕ್ಸ್ನಲ್ಲಿ ಭಾರತದಿಂದ ಗಾಲ್ಫ್ ಸದ್ದು ಮಾಡಿದ್ದು, ಆ ಮೂಲಕ ಅದಿತಿ ಅವರು ಭಾರತದ ಹಿರಿಮೆಯನ್ನು ಎತ್ತಿ ಹಿಡಿದಿದ್ದಾರೆ. ಆರಂಭದಲ್ಲಿ ಮುನ್ನಡೆ ಸಾಧಿಸಿದ ಅದಿತಿ, ಇಂದಿನ ಆಟದಲ್ಲಿ ನಾಲ್ಕನೇ ಸ್ಥಾನವನ್ನು ತಮ್ಮದಾಗಿಸಿಕೊಂಡರು. ಅದಿತಿ ಅವರ ಈ ಸಾಧನೆಗೆ ಪ್ರಧಾನಿ ಮೋದಿ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಟೊಕಿಯೋ ಒಲಿಂಪಿಕ್ಸ್ನಲ್ಲಿ ಭಾರತೀಯ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಉತ್ತಮ ಪ್ರದರ್ಶನ ನೀಡಿದ್ದೀರಿ. ಸ್ಪರ್ಧೆಯಲ್ಲಿ ಅದ್ಭುತ ಕೌಶಲ್ಯ, ಸಂಕಲ್ಪವನ್ನು ತೋರಿಸಿದ್ದೀರಿ. ಪದಕ ಸ್ವಲ್ಪ ದರದಲ್ಲಿ ಕೈತಪ್ಪಿದೆ. ಆದರೆ ನೀವು ಉತ್ತಮ ಸಾಧನೆ ಮೆರೆದಿದ್ದೀರಿ. ಒಂದು ಹೊಸ ದಾರಿಯನ್ನು ಬೆಳಗಿದ್ದೀರಿ. ನಿಮ್ಮ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು ಎಂದು ತಿಳಿಸಿದ್ದಾರೆ.
Well played @aditigolf! You have shown tremendous skill and resolve during #Tokyo2020. A medal was narrowly missed but you’ve gone farther than any Indian and blazed a trail. Best wishes for your future endeavours.
— Narendra Modi (@narendramodi) August 7, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.