ಭೋಪಾಲ್: ಕೊರೋನಾ ಸಾಂಕ್ರಾಮಿಕ ಸೋಂಕಿನ ಅವಧಿಯಲ್ಲಿ ದೇಶದ 80 ಕೋಟಿ ಜನರಿಗೆ ಉಚಿತ ಪಡಿತರವನ್ನು ಒದಗಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಮಧ್ಯಪ್ರದೇಶದಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಕಳೆದ 100 ವರ್ಷಗಳ ಬಳಿಕ ಮಾನವೀಯತೆ ಎದುರಿಸಿದ ಅತೀ ದೊಡ್ಡ ವಿಪತ್ತು ಕೊರೋನಾ ಸಾಂಕ್ರಾಮಿಕ. ಈ ಬಿಕ್ಕಟ್ಟಿನಿಂದ ರಕ್ಷಣೆಗಾಗಿ ಜನರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಬೇಕು ಎಂದು ತಿಳಿಸಿದ್ದಾರೆ.
ಕೊರೋನಾ ಬಿಕ್ಕಟ್ಟು ಎದುರಿಸಲು ಭಾರತದ ಬಡ ಜನರಿಗೆ ಅಗತ್ಯ ನೆರವು ನೀಡುವುದನ್ನು ಕೇಂದ್ರ ಸರ್ಕಾರ ತನ್ನ ಮೊದಲ ಆದ್ಯತೆಯಾಗಿ ಪರಿಗಣಿಸಿದೆ. ಕೊರೋನಾ ಸಾಂಕ್ರಾಮಿಕ ಆರಂಭದಿಂದಲೂ ನಾವು ಬಡ ಜನರ ಆಹಾರ, ಉದ್ಯೋಗಕ್ಕೆ ಸಂಬಂಧಿಸಿದಂತೆ ಚಿಂತನೆ ನಡೆಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.