ನವದೆಹಲಿ: ಕೊರೋನಾ ವಿರುದ್ಧ ಹೋರಾಟಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಅಮೆರಿಕ ಮೂಲದ ಜಾನ್ಸನ್ ಆಂಡ್ ಜಾನ್ಸನ್ ಸಂಸ್ಥೆ ಅಭಿವೃದ್ಧಿ ಮಾಡಿರುವ ಸಿಂಗಲ್ ಡೋಸ್ ಕೊರೋನಾ ಲಸಿಕೆಯ ಬಳಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಈ ಸಂಬಂಧ ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಟ್ವೀಟ್ ಮಾಡಿದ್ದು, ಜಾನ್ಸನ್ ಆಂಡ್ ಜಾನ್ಸನ್ ಕಂಪೆನಿಯ ಸಿಂಗಲ್ ಡೋಸ್ ಕೊರೋನಾ ಲಸಿಕೆ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.
India expands its vaccine basket!
Johnson and Johnson’s single-dose COVID-19 vaccine is given approval for Emergency Use in India.
Now India has 5 EUA vaccines.
This will further boost our nation's collective fight against #COVID19
— Mansukh Mandaviya (@mansukhmandviya) August 7, 2021
ಭಾರತದಲ್ಲಿ ಕೊರೋನಾ ವಿರುದ್ಧ ಬಳಕೆ ಮಾಡಲು ಜಾನ್ಸನ್ ಆಂಡ್ ಜಾನ್ಸನ್ ಕಂಪೆನಿಯ ಕೋವಿಡ್ 19 ಲಸಿಕೆಗೆ ಅವಕಾಶ ನೀಡುವಂತೆ ಸಂಸ್ಥೆ ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು. ಇದೀಗ ಈ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಲಸಿಕೆ ಬಳಕೆಗೆ ಅನುಮೋದನೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.