ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಅಧಿಕಾರಾವಧಿ ಇರುವವರೆಗೆ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜ್ಯದ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದಾಗಿ ಸರ್ಕಾರ ತಿಳಿಸಿದೆ.
ಈ ಸಂಬಂಧ ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರ, ಬಿ. ಎಸ್. ಯಡಿಯೂರಪ್ಪ , ಮಾನ್ಯ ನಿಕಟಪೂರ್ವ ಮುಖ್ಯಮಂತ್ರಿಗಳು ಇವರಿಗೆ, ನೂತನವಾಗಿ ಪದಾರೋಹಣ ಮಾಡಿದ ಮುಖ್ಯಮಂತ್ರಿಗಳ ಪದವಿಯ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಿರುವುದಾಗಿ ತಿಳಿಸಿದೆ.
ರಾಜ್ಯದ ರಾಜ್ಯಪಾಲರ ಆದೇಶಾನುಸಾರ, ಅವರ ಹೆಸರಿನಲ್ಲಿ ಈ ಅಧಿಸೂಚನೆಯನ್ನು ಸರ್ಕಾರ ಹೊರಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.