ಟೊಕಿಯೋ: ಒಲಿಂಪಿಕ್ಸ್ 2020 ರಲ್ಲಿ ಭಾರತದ ಮುಡಿಗೆ ಮೊದಲ ಬಂಗಾರದ ಪದಕ ದಕ್ಕಿದೆ.
ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ಬಂಗಾರದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದ ನೀರಜ್ ದೇಶಕ್ಕೆ ಚಿನ್ನದ ಪದಕದ ಗರಿ ತೊಡಿಸಿದ್ದು, ಆ ಮೂಲಕ ಭಾರತದ ವಿಜಯ ಪತಾಕೆ ಹಾರಿಸಿದ್ದಾರೆ.
ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಎಸೆದ ಚೋಪ್ರಾ, ಎರಡನೇ ಪ್ರಯತ್ನದಲ್ಲಿ 87.58, ಮೂರನೇ ಪ್ರಯತ್ನದಲ್ಲಿ 76.79 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಭಾರತದ ಬಂಗಾರದ ಕನಸು ನನಸಾಗಿಸಿದ್ದಾರೆ. ಆ ಮೂಲಕ 13 ವರ್ಷಗಳ ಬಳಿಕ ಮತ್ತೊಮ್ಮೆ ಭಾರತ ಬಂಗಾರದ ಪದಕವನ್ನು ಗೆದ್ದಿದೆ. ಅಥ್ಲೆಟಿಕ್ಸ್ನಲ್ಲಿ 100 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದಿರುವುದು ಐತಿಹಾಸಿಕವಾಗಿದೆ.
ಭಾರತೀಯ ಸೇನೆಯಲ್ಲಿ ಕಿರಿಯ ನಿಯೋಜಿತ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ಮೂಲಕ ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತ 1 ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಒಟ್ಟು 7 ಪದಕಗಳನ್ನು ಪಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.