ನವದೆಹಲಿ: ಕೊರೋನಾ ಲಸಿಕೆ ಹಾಕಿಸಿಕೊಂಡ ನಾಗರಿಕರು ತಮ್ಮ ವ್ಯಾಕ್ಸಿನೇಷನ್ ಪ್ರಮಾಣ ಪತ್ರವನ್ನು ವಾಟ್ಸ್ಯಾಪ್ ಮೂಲಕ ಕೆಲವೇ ಸೆಂಕೆಂಡ್ಗಳಲ್ಲಿ ಪಡೆದುಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.
ಪ್ರಸ್ತುತ ಜನರು ಕೋವಿನ್ ಪೋರ್ಟಲ್ನಲ್ಲಿ ಲಾಗಿನ್ ಮಾಡಿಕೊಳ್ಳುವ ಮೂಲಕ ತಮ್ಮ ವ್ಯಾಕ್ಸಿನೇಷನ್ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕಿದೆ. ಈಗ ವಾಟ್ಸಾಪ್ ಮೂಲಕ +91 9013151515 ಸಂಖ್ಯೆಯನ್ನು ಸೇವ್ ಮಾಡಿಕೊಂಡು ಸರ್ಟಿಫಿಕೇಟ್ ಪಡೆಯಬಹುದು. ಈ ಸಂಖ್ಯೆಗೆ covid certificate ಎಂದು ಟೈಪ್ ಮಾಡಿ, ಒಟಿಪಿ ನಮೂದಿಸಿ, ಪ್ರಮಾಣ ಪತ್ರಗಳನ್ನು ಸೆಕೆಂಡ್ಗಳಲ್ಲಿಯೇ ಪಡೆಯಬಹುದಾಗಿದೆ ಎಂದು ಸರ್ಕಾರ ಹೇಳಿದೆ.
ಆದರೆ ಜನಸಾಮಾನ್ಯರಿಗೆ ವ್ಯಾಕ್ಸಿನೇಷನ್ ಪ್ರಮಾಣ ಪತ್ರ ಮತ್ತಷ್ಟು ಸುಲಭವಾಗಿ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಾಟ್ಸಾಪ್ ಮೂಲಕವೇ ಪ್ರಮಾಣ ಪತ್ರ ಪಡೆಯಲು ಅನುಕೂಲ ಕಲ್ಪಿಸಿದೆ. ಈಗ ಮೂರು ಹಂತಗಳಲ್ಲಿ ಕೊರೋನಾ ವ್ಯಾಕ್ಸಿನೇಷನ್ ಪ್ರಮಾಣ ಪತ್ರಗಳನ್ನು ಸುಲಭವಾಗಿ ಪಡೆದುಕೊಳ್ಳಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.