ನವದೆಹಲಿ: ಪ್ರಧಾನಿ ಮೋದಿ ಅವರು ಪಿಎಂ ಕಿಸಾನ್ ಯೋಜನೆಯಡಿ ಇಂದು ಸುಮಾರು 19,500 ಕೋಟಿ ರೂ. ಗಳನ್ನು 9.75 ಕೋಟಿಗೂ ಅಧಿಕ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಿದ್ದಾರೆ.
ಬಳಿಕ ಮಾತನಾಡಿದ ಅವರು, ದೇಶದ ಅರ್ಹ ಫಲಾನುಭವಿ ರೈತರಿಗೆ ವರ್ಷಕ್ಕೆ 6 ಸಾವಿರದಂತೆ ಮೂರು ಸಮಾನ ವಾರ್ಷಿಕ ಕಂತುಗಳಲ್ಲಿ ತಲಾ 2 ಸಾವಿರದಂತೆ ವಿತರಿಸಲಾಗುತ್ತಿದೆ. 2019 ರಲ್ಲಿ ಈ ಯೋಜನೆಯನ್ನು ಘೋಷಣೆ ಮಾಡಲಾಯಿತು. ಪ್ರಸ್ತುತ ಈ ನಿಧಿ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿದೆ ಎಂದು ಹೇಳಿದ್ದಾರೆ.
ಈ ಮೂಲಕ ಈವರೆಗೆ ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಯಡಿ ದೇಶದ ರೈತರ ಖಾತೆಗೆ 1.57 ಲಕ್ಷ ಕೋಟಿ ರೂ. ಗಳನ್ನು ಸುಮಾರು 9 ಕಂತುಗಳಲ್ಲಿ ವರ್ಗಾವಣೆ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.